ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮನೆ ಮೇಲೆ ಇ.ಡಿ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ದೆಹಲಿಯಲ್ಲಿರುವ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ.

ದೆಹಲಿಯ ಫ್ರೆಂಡ್ಸ್ ಕಾಲೋನಿಯಲ್ಲಿನ ಮನೆಯಲ್ಲಿ ಇಡಿ ತಪಾಸಣೆ ನಡೆದಿದೆ, ಒಟ್ಟಾರೆ ಲಾಲು ಪ್ರಸಾದ್ ಯಾದವ್ ಹಾಗೂ ಅವರ ಕುಟುಂಬ ಸದಸ್ಯರಿಗೆ ಸೇರಿರುವ ೧೫ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಇಡಿ ಅಧಿಕಾರಿಗಳು ಲಾಲು ಪ್ರಸಾದ್ ಯಾದವ್ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಪತ್ನಿ ರಾಬ್ರಿ ದೇವಿ ಅವರನ್ನೂ ಪ್ರಶ್ನೆ ಮಾಡಲಾಗಿತ್ತು. ಇಡೀ ಕುಟುಂಬ ಹಗರಣದಲ್ಲಿ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!