Sunday, December 3, 2023

Latest Posts

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಮನೆ ಮೇಲೆ ಇಡಿ ದಾಳಿ

ಹೊಸದಿಗಂತ ವರದಿ ಶಿವಮೊಗ್ಗ:

ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿಯಲ್ಲಿ ED ( ಜಾರಿ ನಿರ್ದೇಶನಲಾಯ) ಅಧಿಕಾರಿಗಳಿಂದ ದಾಳಿ ಆಗಿದೆ. ಕಾಂಗ್ರೆಸ್ ಮುಖಂಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.

ಪಟ್ಟಣದ ಬೆಟ್ಟಮಕ್ಕಿಯ ನಿವಾಸದ ಮೇಲೆ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ
ಪರಿಶೀಲನೆ ನೆಡೆಸುತ್ತಿದ್ದಾರೆ. ಆರ್ ಎಂ ಮಂಜುನಾಥ್ ಗೌಡರು ಬೆಂಗಳೂರಿನಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಉಳಿದಂತೆ ತಾಲೂಕಿನ ಹಣಗೆರೆಕಟ್ಟೆ ಸಮೀಪದ ಕರಕುಚ್ಚಿ, ಶಿವಮೊಗ್ಗದ ಶಾಂತಿನಗರ, ಸೇರಿ ಹಲವು ಕಚೇರಿ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

5 ಕ್ಕೂ ಹೆಚ್ಚು ವಾಹನಗಳಲ್ಲಿ 15 ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ಮಾಡಿದ್ದೂ ಪ್ರತ್ಯೇಕ ಫೋರ್ಸ್ ನೊಂದಿಗೆ ಇಡಿ ಟೀಂ ಬಂದಿದೆ. ಡಿಸಿಸಿ ಬ್ಯಾಂಕ್ ಬಹು ಕೋಟಿ ನಕಲಿ ಬಂಗಾರದ ಹಗರಣ ತನಿಖೆ ಸಂಬಂಧ ಈಡಿ ದಾಳಿ ನಡೆಸಿರುವ ಸಾಧ್ಯತೆ ಇದ್ದು ಕೆಲ ತಿಂಗಳ ಹಿಂದೆಯೇ ಈ ಸಂಬಂಧ ಡಿಸಿಸಿ ಬ್ಯಾಂಕ್ ನಿಂದ ಇಡಿ ಮಾಹಿತಿ ಕೇಳಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!