ಇಡಿ ಪ್ರಕರಣ: ಪತ್ರಕರ್ತ ಸಿದ್ದಿಕ್ ಕಪ್ಪನ್​​ಗೆ ಜಾಮೀನು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಉತ್ತರ ಪ್ರದೇಶ ಜೈಲಿನಲ್ಲಿರುವ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್​​ಗೆ ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಜಾಮೀನು ಅನುಮತಿಸಿದೆ.
ಈ ಹಿಂದೆ ಯುಎಪಿಎ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ನೀಡಿತ್ತು, ಆದರೆ ಇಡಿ ಪ್ರಕರಣಕ್ಕಾಗಿ ಜೈಲಿನಲ್ಲಿದ್ದರು.
ಮಲಯಾಳಂ ನ್ಯೂಸ್ ಪೋರ್ಟಲ್ ಅಝಿಮುಖಂನ ವರದಿಗಾರ ಮತ್ತು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ (ಕೆಯುಡಬ್ಲ್ಯೂಜೆ) ನ ದೆಹಲಿ ಘಟಕದ ಕಾರ್ಯದರ್ಶಿ ಕಪ್ಪನ್ ಅವರನ್ನು 2020 ರ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದಲ್ಲಿ ಇತರ ಮೂವರ ಜತೆ ಬಂಧಿಸಲಾಗಿತ್ತು. 19ರ ಹರೆಯದ ದಲಿತ ಯುವತಿಯ ಮೇಲೆ ಭೀಕರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡಲು ಹೋಗುತ್ತಿದ್ದಾಗ ಇವರನ್ನು ಬಂಧಿಸಲಾಗಿತ್ತು.
ಇದಾದ ಬಳಿಕ ಲಕ್ನೋ ನ್ಯಾಯಾಲಯ ಜಾಮೀನು ನಿರಾಕರಿಸಿದ ನಂತರ ಕಪ್ಪನ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಕಳೆದ ವರ್ಷ ಫೆಬ್ರವರಿಯಲ್ಲಿ ಆರೋಪಿಗಳ ವಿರುದ್ಧ ಇಡಿ ಪ್ರಾಸಿಕ್ಯೂಷನ್ ದೂರನ್ನು ಸಲ್ಲಿಸಿದ ನಂತರ ಈ ತಿಂಗಳ ಆರಂಭದಲ್ಲಿ ಲಕ್ನೋ ನ್ಯಾಯಾಲಯವು ಪಿಎಂಎಲ್‌ಎ ಪ್ರಕರಣದಲ್ಲಿ ಕಪ್ಪನ್ ಮತ್ತು ಇತರ ಆರು ಮಂದಿ ವಿರುದ್ಧ ಆರೋಪಗಳನ್ನು ರೂಪಿಸಿತ್ತು.ಆರೋಪಿಗಳು ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ವಿದ್ಯಾರ್ಥಿ ವಿಭಾಗ – ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ಸದಸ್ಯರು ಎಂದು ಪೊಲೀಸರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!