ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ
ಚೆನ್ನೈ ಮತ್ತು ವಿಲ್ಲುಪುರಂ ಜಿಲ್ಲೆಗಳಲ್ಲಿರುವ ಅವರ ನಿವಾಸದಲ್ಲಿ ಶೋಧ ನಡೆಸಲಾಗುತ್ತಿದೆ. ಸಚಿವರು ಮತ್ತು ಅವರ ಪುತ್ರ ಹಾಗೂ ಸಂಸದ ಗೌತಮ್ ಸಿಗಮಣಿ ಅವರ ಮನೆಯಲ್ಲೂ ಹುಡುಕಾಟ ನಡೆದಿದೆ.