Sunday, August 14, 2022

Latest Posts

ಇಂದು ಸೋನಿಯಾ ಗಾಂಧಿಗೆ ಇಡಿ ಡ್ರಿಲ್: ದೆಹಲಿ ಪೋಲೀಸರಿಂದ ಕಟ್ಟೆಚ್ಚರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಗುರುವಾರ) ಕಾಂಗ್ರೆಸ್‌ ನಾಯಕಿ ಸOನಿಯಾ ಗಾಂಧಿಯವರು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಲಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಆದರೆ ಪ್ರತಿಭಟನೆ ನಡೆಸಲು ಇದುವರಗೂ ಯಾವುದೇ ಅನುಮತಿ ಪಡೆಯಲಾಗಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಸಂಸತ್ತಿನಲ್ಲಿ ಮುಂಗಾರು ಅಧಿವೇಶನದ ಮದ್ಯೆಯೇ ಈ ಬೆಳವಣಿಗೆ ನಡೆದಿದೆ.

ಕಾನೂನು-ಸುವ್ಯವಸ್ಥೆಯನ್ನು ನಿರೀಕ್ಷಿಸಿ, ದೆಹಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಚೇರಿ, ಸೋನಿಯಾ ಗಾಂಧಿ ಅವರ ಮನೆ ಮತ್ತು ಇಡಿ ಕಚೇರಿಯ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಟ್ರಾಫಿಕ್‌ ದಟ್ಟಣೆಯ ಸಾಧ್ಯತೆಯಿದ್ದು ಹಲವಾರು ಬದಲೀ ಮಾರ್ಗಗಳನ್ನು ರಚಿಸಲಾಗಿದೆ. ಅಲ್ಲದೇ ದೆಹಲಿ ಗಡಿ ಭಾಗದಲ್ಲೂ ಕೂಡ ಭದ್ರತೆ ಹೆಚ್ಚಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss