ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ವಿಚಾರಣೆ ನಡೆಸಿದ ಇಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ನವದೆಹಲಿಯಲ್ಲಿ ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತನಿಖೆಗೆ ಹಾಜರಾಗುವಂತೆ ಖರ್ಗೆ ಅವರಿಗೆ ಜಾರಿ ನಿರ್ದೇಶಾಲಯ ಅಧಿಕಾರಿಗಳು ರಾಜ್ಯಸಭೆಯ ವಿಪಕ್ಷ ನಾಯಕರಾಗಿರುವ ಮಲ್ಲಿಕಾರ್ಜನ ಖರ್ಗೆ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುವುದು, ಸಂಸ್ಥೆಯು ತನಿಖೆಯ ಹಂತದಲ್ಲಿ ಅವರಿಂದ ಕೆಲವು ವಿಚಾರಗಳನ್ನು ಸ್ಪಷ್ಟಪಡಿಸಿಕೊಳ್ಳಲು ಬಯಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏನಿದು ನ್ಯಾಷನಲ್‌ ಹೆರಾಲ್ಡ್‌ ಹಗರಣ?
ನ್ಯಾಷನಲ್‌ ಹೆರಾಲ್ಡ್‌ ಜವಾಹರಲಾಲ್ ನೆಹರೂ ಅವರ ನೇತೃತ್ವದಲ್ಲಿ 1938 ರಲ್ಲಿ ಆರಂಭವಾದ ಪತ್ರಿಕೆ. ಈ ಪತ್ರಿಕೆಯ ಮಾಲೀಕತ್ವವನ್ನು ಹೊಂದಿದ್ದ ಅಸೋಸಿಯೇಟೆಡ್‌ ಜರ್ನಲ್ಸ್‌ ಕಂಪನಿಯನ್ನು ರಾಹುಲ್‌ ಗಾಂಧಿ, ಸೋನಿಯಾ, ಆಸ್ಕರ್‌ ಒಡೆತನದ ಯಂಗ್‌ ಇಂಡಿಯಾ ಕಂಪನಿ ಅಕ್ರಮವಾಗಿ ಖರೀದಿಸಿದ ಆರೋಪವಿದೆ. 90.25 ಕೋಟಿ ರು. ಮೌಲ್ಯದ ಅಸೋಸಿಯೇಟೆಡ್‌ ಜರ್ನಲ್ಸ್‌ ಕಂಪನಿಯನ್ನು ಕೇವಲ 50 ಲಕ್ಷ ರುಪಾಯಿ ನೀಡಿ ಖರೀದಿಸಲಾಗಿದೆ ಎಂದು ಹೇಳಲಾಗಿದೆ. ಅಲ್ಲದೇ ಯಂಗ್‌ ಇಂಡಿಯಾ ಸಂಸ್ಥೆಯ ಆಸ್ತಿ ವಿವರ ಸಲ್ಲಿಕೆ ವೇಳೆ ರಾಹುಲ್‌ ಗಾಂಧಿ ಅದರಲ್ಲಿ ತಮ್ಮ ಷೇರು ಮೌಲ್ಯ 68 ಲಕ್ಷ ರು. ಇದೆ ಎಂದು ಮಾಹಿತಿ ನೀಡಿದ್ದರು. ಆದರೆ ಆದಾಯ ತೆರಿಗೆ ಇಲಾಖೆ ಮೌಲ್ಯಮಾಪನದ ವೇಳೆ ರಾಹುಲ್‌ ಷೇರುಗಳ ಮೌಲ್ಯ 154 ಕೋಟಿ ರುಪಾಯಿ ಎಂಬುದು ಪತ್ತೆಯಾಗಿತ್ತು. ಈ ತೆರಿಗೆ ವಂಚನೆ ಪ್ರಕರಣವನ್ನು ಇಡಿ ಇದೀಗ ವಿಚಾರಣೆ ನಡೆಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!