ಬಿಬಿಸಿ ಇಂಡಿಯಾ ವಿರುದ್ಧ ಪ್ರಕರಣ ದಾಖಲಿಸಿದ ಇ.ಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್‌ನ (ಬಿಬಿಸಿ) ಭಾರತದ ಕಚೇರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ವಿದೇಶಿ ವಿನಿಯಮ ನಿಯಮ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಹೊಸ ತನಿಖೆ ಅರಂಭವಾಗಿದ್ದು, ತನ್ನ ಹಣಕಾಸಿನ ದಾಖಲೆಗಳನ್ನು ಒದಗಿಸುವಂತೆ ಬಿಬಿಸಿ ಇಂಡಿಯಾಗೆ ಸೂಚನೆ ನೀಡಲಾಗಿದೆ.

ಜಾರಿ ನಿರ್ದೇಶನಾಲಯವು ಬಿಬಿಸಿಯ ವಿದೇಶಿ ರವಾನೆಯ ಚಟುವಟಿಕೆಗಳನ್ನು ಪರಿಶೀಲನೆ ಮಾಡುತ್ತಿದೆ ಎಂದು ಮೂಲಗಳು ಗುರುವಾರ ತಿಳಿಸಿದೆ.

ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ (ಎಫ್‌ಇಎಂಎ) ಅಡಿಯಲ್ಲಿ ಬಿಬಿಸಿ ಇಂಡಿಯಾ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದೆ.

ತನ್ನ ಲೆಕ್ಕಪತ್ರಗಳ ದಾಖಲೆ ಹಾಗೂ ಹಣಕಾಸು ದಾಖಲೆಗಳನ್ನು ತನಗೆ ನೀಡುವಂತೆ ಬಿಬಿಸಿ ಇಂಡಿಯಾಗೆ ತನಿಖಾ ಸಂಸ್ಥೆ ಹೇಳಿದೆ. ಇದು ಬಿಬಿಸಿ ವಿರುದ್ಧದ ಕೇಂದ್ರ ತನಿಖಾ ಸಂಸ್ಥೆಗಳ ಮುಂದಿನ ನಡೆ ಕುರಿತು ಭಾರೀ ಕುತೂಹಲ ಮೂಡಿಸಿದೆ.

ಫೆಬ್ರವರಿಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ತನಿಖೆಯ ಭಾಗವಾಗಿ ಭಾರತದಲ್ಲಿನ ಬಿಬಿಸಿ ಕಚೇರಿಗಳನ್ನು ಶೋಧಿಸಿದ್ದರು. ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಮೋದಿ ಸಾಕ್ಷ್ಯಚಿತ್ರದ ಕುರಿತು ಬಿಬಿಸಿ ವಿವಾದದಲ್ಲಿ ಸಿಲುಕಿಕೊಂಡಿದೆ, ಇದು ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಟೀಕಿಸಿದಂತೆ ಇತ್ತು ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!