June 28, 2026
Sunday, June 28, 2026
spot_img

‘ED ಸರ್ಕಾರದ ಕೈಗೊಂಬೆ’: ಜಾಮೀನು ಬಳಿಕ ರಾಬರ್ಟ್ ವಾದ್ರಾ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿಕೋಪುರ ಭೂ ವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಉದ್ಯಮಿ ಹಾಗೂ ರಾಬರ್ಟ್ ವಾದ್ರಾ ಜಾರಿ ನಿರ್ದೇಶನಾಲಯದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇಡಿ ಸರ್ಕಾರದ ಸೂಚನೆಯ ಮೇರೆಗೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿರುವ ವಾದ್ರಾ, ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ ಎಂದಿದ್ದಾರೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿ ರೌಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬಳಿ ಮುಚ್ಚಿಡಲು ಏನೂ ಇಲ್ಲ. ನಾನು ಯಾವಾಗಲೂ ತನಿಖೆಗೆ ಸಹಕರಿಸುತ್ತೇನೆ ಮತ್ತು ಕೇಳುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:

ಹಿರಿಯ ವಕೀಲ ದೇವದತ್ ಕಾಮತ್ ಹಾಗೂ ಇತರ ವಕೀಲರೊಂದಿಗೆ ನ್ಯಾಯಾಲಯಕ್ಕೆ ಬಂದಿದ್ದ ವಾದ್ರಾ, ಕಾನೂನು ಪ್ರಕ್ರಿಯೆಯನ್ನು ಗೌರವಿಸುತ್ತೇನೆ ಎಂದು ಹೇಳಿದ್ದಾರೆ. ಪ್ರಕರಣ ಮುಂದುವರಿದಂತೆ ಎಲ್ಲಾ ನಿಯಮಗಳನ್ನು ಪಾಲಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.

ಶಿಕೋಪುರ ಭೂ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಮನ್ಸ್ ನೀಡಿದ್ದ ಹಿನ್ನೆಲೆಯಲ್ಲಿ ವಾದ್ರಾ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಈ ಹೇಳಿಕೆಗಳು ಇದೀಗ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಕೇಂದ್ರ ತನಿಖಾ ಸಂಸ್ಥೆಗಳ ಕಾರ್ಯವೈಖರಿ ಮತ್ತೆ ಪ್ರಶ್ನೆಗೆ ಒಳಗಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !