ಇಡಿಯಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ 7ನೇ ಬಾರಿ ಸಮನ್ಸ್ ಜಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ 7ನೇ ಬಾರಿಗೆ ಸಮನ್ಸ್ ಜಾರಿ ಮಾಡಿದ್ದು, ಫೆ.26 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಈ ಹಿಂದೆ ಕೇಜ್ರಿವಾಲ್ ಅವರಿಗೆ 2023ರ ನವೆಂಬರ್ 2 ಹಾಗೂ ಡಿಸೆಂಬರ್ 21 ರಂದು ಮತ್ತು 2024ರ ಜ.3, 18, ಫೆ.2, 14 ಹೀಗೆ 6 ಬಾರಿ ಇಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ ಕೇಜ್ರಿವಾಲ್ ಅವರು ಈ ಎಲ್ಲಾ ಸಮನ್ಸ್ ಗಳಿಗೆ ಹಾಜರಾಗದೇ ಗೈರಾಗಿದ್ದು, ಇದೀಗ  7ನೇ ಬಾರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ.

ಎಲ್ಲಾ ಸಮನ್ಸ್ ಗಳು ಕಾನೂನುಬಾಹಿರ
ಈ ಎಲ್ಲಾ ಸಮನ್ಸ್ ಗಳು ಕಾನೂನುಬಾಹಿರ ಹಾಗೂ ರಾಜಕೀಯ ಪ್ರೇರಿತವಾಗಿದೆ. ಇದು ನಾನು ಚುನಾವಣಾ ಪ್ರಚಾರಕ್ಕೆ ಹೋಗದಂತೆ ತಡೆಯಲು ಮಾಡಿರುವ ಪಿತೂರಿ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!