ವಿಚಾರಣೆಗೆ ಹಾಜರಾಗುವಂತೆ ಸೋನಿಯಾಗೆ ಇಡಿ ಹೊಸ ಸಮನ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಹೊಸ ನೋಟೀಸ್ ಜಾರಿ ಮಾಡಿದೆ. ನೋಟಿಸ್‌ನಲ್ಲಿ, ಈ ತಿಂಗಳ 23 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸೋನಿಯಾ ಅವರಿಗೆ ಸೂಚಿಸಿದ್ದಾರೆ. ವಾಸ್ತವವಾಗಿ, ಸೋನಿಯಾ ಗಾಂಧಿ ಈ ತಿಂಗಳ 8 ರಂದು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ಕೊರೊನಾ ಕಾರಣದಿಂದ ವಿಚಾರಣೆಗೆ ಹಾಜರಾಗದ ಕಾರಣ ಮತ್ತೊಮ್ಮೆ ನೊಟೀಸ್‌ ನೀಡಿದೆ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ವೈದ್ಯರಿಂದ ಚಿಕಿತ್ಸೆ ಪಡೆಯುತಿದ್ದು, ಕೊರೊನಾದಿಂದ ಚೇತರಿಸಿಕೊಳ್ಳಲು ಕನಿಷ್ಠ 3 ವಾರಗಳು ಬೇಕಾಗುತ್ತವೆ ಮತ್ತು ಅಲ್ಲಿಯವರೆಗೆ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಹೇಳಿದರು. ಅವರ ಆರೋಗ್ಯದ ದೃಷ್ಟಿಯಿಂದ ಮೂರು ವಾರಗಳ ಕಾಲಾವಕಾಶ ನೀಡುವಂತೆ ಕೋರಲಾಗಿತ್ತು. ಸೋನಿಯಾ ಗಾಂಧಿ ಮನವಿಯನ್ನು ಪರಿಗಣಿಸಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇದೀಗ ಹೊಸದಾಗಿ ನೋಟಿಸ್ ಜಾರಿ ಮಾಡಿದ್ದಾರೆ. ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!