ಹೊಸದಿಗಂತ ಡಿಜಿಟಲ್ ಡೆಸ್ಕ್:
I-PAC ಕಚೇರಿ ಮತ್ತು ಅದರ ನಿರ್ದೇಶಕ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ನಡೆದ ತನಿಖೆ ಮತ್ತು ಶೋಧ ಕಾರ್ಯಾಚರಣೆಯ ವೇಳೆ ಮೂವರು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ಬೆದರಿಕೆ ಮತ್ತು ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ.
ಕೋಲ್ಕತ್ತಾ ಐ-ಪಿಎಸಿ ಕಚೇರಿಯಲ್ಲಿ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಮುಖ್ಯಮಂತ್ರಿಯ ವಿರುದ್ಧ ಈ ಅರ್ಜಿ ಸಲ್ಲಿಸಲಾಗಿದೆ. ಕಾರ್ಯಾಚರಣೆಯಲ್ಲಿದ್ದ ಮೂವರು ಇಡಿ ಅಧಿಕಾರಿಗಳು ಈ ಅರ್ಜಿ ಸಲ್ಲಿಸಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಡಿಜಿಪಿ ಶೋಧ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಜನವರಿ 8 ರಂದು ಸುಮಾರು 2,742 ಕೋಟಿ ರೂ.ಗಳ ಕಲ್ಲಿದ್ದಲು ಹಗರಣದಲ್ಲಿ ಶೋಧ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಕ್ಕಾಗಿ ಸಿಬಿಐ ಎಫ್‌ಐಆರ್ ದಾಖಲಿಸಿ ಬ್ಯಾನರ್ಜಿ, ಡಿಜಿಪಿ ರಾಜೀವ್ ಕುಮಾರ್ ಮತ್ತು ಸಿಪಿ ಮನೋಜ್ ವರ್ಮಾ ಅವರ ವಿರುದ್ಧ ತನಿಖೆ ನಡೆಸಬೇಕೆಂದು ಅದು ಒತ್ತಾಯಿಸಿದೆ.
ಟಿಎಂಸಿ ಬೆಂಬಲಿಗರು ಹೈಕೋರ್ಟ್ ಕಲಾಪವನ್ನ ಹೈಜಾಕ್ ಮಾಡಲು ಪ್ರಯತ್ನಿಸಿದರು. ಟಿಎಂಸಿ ಬೆಂಬಲಿಗರು ಹೈಕೋರ್ಟ್ ವಿಚಾರಣೆಗೆ ಮುನ್ನ ವಾಟ್ಸಾಪ್ ಗುಂಪುಗಳ ಮೂಲಕ ಪೂರ್ವಯೋಜಿತ ಗೊಂದಲ ಸೃಷ್ಟಿಸಿದರು. ಜನವರಿ 8 ರಂದು ಸುಮಾರು 2,742 ಕೋಟಿ ರೂ. ಕಲ್ಲಿದ್ದಲು ಹಗರಣದಲ್ಲಿ ಶೋಧ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ರಾಜೀವ್ ಕುಮಾರ್ ಮತ್ತು ಸಿಪಿ ಮನೋಜ್ ವರ್ಮಾ ಅವರ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕೆಂದು ಇಡಿ ಒತ್ತಾಯಿಸಿದೆ.



