ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಲು ಇಡಿ ವಿರೋಧ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಲು ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದ್ದು, ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಚುನಾವಣಾ ಪ್ರಚಾರದ ಹಕ್ಕು ಮೂಲಭೂತವಲ್ಲ ಎಂದು ತನಿಖಾ ಸಂಸ್ಥೆ ಹೇಳಿದೆ.

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನಿಗೆ ಸಂಬಂಧಿಸಿದಂತೆ ಶುಕ್ರವಾರ ಸುಪ್ರೀಂಕೋರ್ಟ್ (Supreme Court) ಮಧ್ಯಂತರ ಆದೇಶ ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆ ಅದಕ್ಕೂ ಮುನ್ನ ಇಡಿ ಉಪ ನಿರ್ದೇಶಕಿ ಭಾನು ಪ್ರಿಯಾ ಅವರು ಅಫಿಡವಿಟ್ ಸಲ್ಲಿಸಿದ್ದಾರೆ.

ಚುನಾವಣೆಗಾಗಿ ಪ್ರಚಾರ ಮಾಡುವ ಹಕ್ಕು ಮೂಲಭೂತ, ಸಾಂವಿಧಾನಿಕ ಅಥವಾ ಕಾನೂನುಬದ್ಧ ಹಕ್ಕಲ್ಲ. ಈವರೆಗೂ ಯಾವುದೇ ರಾಜಕೀಯ ನಾಯಕರು ಚುನಾವಣಾ ಸ್ಪರ್ಧಿಸುವ ಅಭ್ಯರ್ಥಿಯಲ್ಲದಿದ್ದರೇ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ಪಡೆದಿಲ್ಲ. ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದರೆ ಯಾವುದೇ ರಾಜಕಾರಣಿಯನ್ನು ಬಂಧಿಸಲು ಮತ್ತು ನ್ಯಾಯಾಂಗ ಬಂಧನದಲ್ಲಿಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಸುಮಾರು 123 ಚುನಾವಣೆಗಳು ನಡೆದಿವೆ ಮತ್ತು ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದರೆ ಯಾವುದೇ ರಾಜಕಾರಣಿಯನ್ನು ಬಂಧಿಸಲಾಗುವುದಿಲ್ಲ ಮತ್ತು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗುವುದಿಲ್ಲ. ಏಕೆಂದರೆ ವರ್ಷಪೂರ್ತಿ ಚುನಾವಣೆಗಳು ನಡೆಯುತ್ತವೆ ಎಂದು ಇಡಿ ತನ್ನ ಅಫಿಡವಿಟ್ ನಲ್ಲಿ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!