ED ದಾಳಿ: ಭ್ರಷ್ಟಾಚಾರವೇ ಕಾಂಗ್ರೆಸ್‌ನ ನಿಜವಾದ ಗ್ಯಾರಂಟಿ ಎಂದ ಬಿಜೆಪಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಟ್‌ಕಾಯಿನ್ ಹಗರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೂ ತೀವ್ರತೆ ಹೆಚ್ಚಾಗಿದೆ. ಜಾರಿ ನಿರ್ದೇಶನಾಲಯದ ದಾಳಿಯನ್ನು ಆಧರಿಸಿಕೊಂಡು ಬಿಜೆಪಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ‘ಭ್ರಷ್ಟಾಚಾರವೇ ಕಾಂಗ್ರೆಸ್‌ನ ನಿಜವಾದ ಗ್ಯಾರಂಟಿ’ ಎಂದು ಆರೋಪಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಎನ್‌.ಎ. ಹ್ಯಾರಿಸ್ ಹಾಗೂ ಅವರ ಕುಟುಂಬಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ನಡೆದ ಇಡಿ ದಾಳಿ, ಸರ್ಕಾರದ ನಿಜ ಮುಖವನ್ನು ಬಹಿರಂಗಪಡಿಸಿದೆ ಎಂದು ಹೇಳಿದೆ. ಬಿಟ್‌ಕಾಯಿನ್ ಹಗರಣದಲ್ಲಿ ಪ್ರಮುಖ … Continue reading ED ದಾಳಿ: ಭ್ರಷ್ಟಾಚಾರವೇ ಕಾಂಗ್ರೆಸ್‌ನ ನಿಜವಾದ ಗ್ಯಾರಂಟಿ ಎಂದ ಬಿಜೆಪಿ