ಲಾಲು ಕುಟುಂಬದ ಮೇಲೆ ಇಡಿ ದಾಳಿ: 1 ಕೋಟಿ ರೂ. ನಗದು, 600 ಕೋಟಿ ರೂ. ಲೆಕ್ಕವಿಲ್ಲದ ಆದಾಯ ಪತ್ತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ ‌:

ಉದ್ಯೋಗಕ್ಕಾಗಿ ಭೂ ಹಗರಣದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಕುಟುಂಬದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು, ಈ ವೇಳೆ 1 ಕೋಟಿ ರೂ. ನಗದು ಮತ್ತು 1900 ಅಮೆರಿಕನ್ ಡಾಲರ್ ವಿದೇಶಿ ಕರೆನ್ಸಿ, 1.5 ಕೆಜಿಗೂ ಹೆಚ್ಚಿನ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದುಇಡಿ ಶನಿವಾರ ಹೇಳಿದೆ.

24 ಕಡೆಗಳಲ್ಲಿ ದಾಳಿ ನಡೆದಿದ್ದು, ಒಟ್ಟಾರೇ ಲೆಕ್ಕವಿಲ್ಲದ 600 ಕೋಟಿ ರೂ. ಆದಾಯ ಪತ್ತೆ ಮಾಡಲಾಗಿದೆ. ಲಾಲೂ ಪ್ರಸಾದ್ ಕುಟುಂಬ ಮತ್ತು ಅವರ ಸಹಚರರ ಪರವಾಗಿ ರಿಯಲ್ ಎಸ್ಟೇಟ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಾಡಿರುವ ಹೆಚ್ಚಿನ ಹೂಡಿಕೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಇಡಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!