spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಾಸಕ ಜಮೀರ್ ಮನೆ ಮೇಲೆ ಇಡಿ ದಾಳಿಗೆ ರಾಜಕೀಯ ಬಣ್ಣ ಹಚ್ಚುವುದು ಸರಿಯಲ್ಲ: ಸಚಿವ ಜೆ.ಸಿ.ಮಾಧುಸ್ವಾಮಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಮೈಸೂರು:

ಬೆಂಗಳೂರಿನ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರ ಮನೆ ಮೇಲಿನ ಇಡಿ,ಐಟಿ ದಾಳಿಗೆ ಕಾಂಗ್ರೆಸ್‌ನವರು ರಾಜಕೀಯ ಬಣ್ಣ ಹಚ್ಚುವುದು ಸರಿಯಲ್ಲ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ಗುರುವಾರ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ, ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿಗಳ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಜಮೀರ್‌ಗೆ ಬೇಕಾದಷ್ಟು ವ್ಯವಹಾರ ಇದೆ. ಅವರು ಬ್ಯೂಸಿನೆಸ್ ಕ್ಲಾಸ್ ಜನ. ಅವರೇನೂ ನನ್ನ ರೀತಿ ಹಳ್ಳಿಯಲ್ಲಿ ಇರುವ ಶಾಸಕರಲ್ಲ. ಅವರ ಮನೆ ಮೇಲಿನ ಐಟಿ, ಇಡಿ ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್‌ನವರು ಹೇಳುವುದು ಸರಿಯಲ್ಲ. ಅದರಲ್ಲೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅಂತಹವರು ಹೀಗೆ ಹೇಳುವುದು ತಪ್ಪು. ವ್ಯವಹಾರದ ಲೆಕ್ಕ ಪತ್ರಗಳಲ್ಲಿ ಅನುಮಾನ ಬಂದಾಗ ಈ ರೀತಿ ದಾಳಿ ನಡೆಯುವುದು ಸಹಜ.

ಆದರೆ ದಾಳಿಯೆ ತಪ್ಪು ಎಂದರೇ ಹೇಗೇ ಹೇಳಿ? ಸ್ವಾಯತ್ತ ಸಂಸ್ಥೆಗಳು ಅವರ ಕೆಲಸ ಅವರು ಮಾಡಬಾರದಾ? ಇದು ರಾಜಕೀಯ ದಾಳಿಯಲ್ಲ. ಲೆಕ್ಕದ ಅನುಮಾನ ಇದ್ದಾಗ ಪರಿಶೀಲನೆಗೆ ಬಂದಿರುತ್ತಾರೆ. ಜಮೀರ್ ಲೆಕ್ಕ ಪತ್ರ ಸರಿ ಇಟ್ಟು ಕೊಂಡಿದ್ದಾರೆ ಅದನ್ನು ತೋರಿಸುತ್ತಾರೆ ಅಷ್ಟೆ. ಇದಕ್ಕೆ ಬೇರೆ ರೀತಿಯ ಬಣ್ಣ ಬೇಡ ಎಂದು ತಿಳಿಸಿದರು.

ಕಾಂಗ್ರೆಸ್‌ನವರು ತಮ್ಮ ಆಡಳಿತ ಕಾಲದಲ್ಲಿ ಐಟಿ-ಇಡಿ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಂಡoತೆಯೇ ಈಗಲೂ ಆಗುತ್ತಿದೆ ಎಂದು ತಪ್ಪಾಗಿ ಭಾವಿಸಿದ್ದಾರೆ ಎಂದು ಟಾಂಗ್ ನೀಡಿದರು.

ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಕಾಲದಿಂದ ಸಿದ್ದರಾಮಯ್ಯ ಕಾಲದವರಗೂ ಮೈಸೂರು ಭಾಗಕ್ಕೆ ಪ್ರಾತಿನಿಧ್ಯ ಹೆಚ್ಚಾಗಿತ್ತು. ಮೈಸೂರು ಭಾಗದವರೆ ಹೆಚ್ಚು ಸಚಿವರು ಇರುತ್ತಿದ್ದರು. ಈಗ ಹಾಗೆ ಆಗಿಲ್ಲ. ಪ್ರಾದೇಶಿಕ ಅಸಮತೋಲನ ಎಂಬ ಪದ ಬಳಸಬಾರದು. ಕೆಲವು ಸಲ ಅನಿವಾರ್ಯವಾಗಿರುತ್ತದೆ. ಸಚಿವರಾಗುವುದು ಇಡೀ ರಾಜ್ಯಕ್ಕೆ. ಅದನ್ನು ಒಂದು ಜಿಲ್ಲೆಗೆ ಸೀಮಿತಗೊಳಿಸಬಾರದು ಎಂದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss