ಉದ್ಯೋಗಕ್ಕಾಗಿ ಭೂ ಹಗರಣ : ಬಿಹಾರದ 15 ಸ್ಥಳಗಳಲ್ಲಿ ಇಡಿ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಹಾರದ 15 ಕಡೆಗಳಲ್ಲಿ ದಾಳಿ ನಡೆಸಿ ದಾಖಲೆಗಳ ಶೋಧ ನಡೆಸುತ್ತಿದ್ದಾರೆ.

ರೈಲ್ವೆ ಉದ್ಯೋಗಕ್ಕಾಗಿ ಭೂಮಿ ಉಡುಗೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇತ್ತೀಚೆಗಷ್ಟೇ ಬಿಹಾರ ಮಾಜಿ ಸಿಎಂ ರಾಬ್ದಿ ದೇವಿ ಹಾಗೂ ಮಾಜಿ ರೈಲ್ವೆ ಸಚಿವ ಲಾಲೂ ಪ್ರಸಾದ್ ಯಾದವ್ ಅವರನ್ನು ವಿಚಾರಣೆ ನಡೆಸಿದ್ದರು.

ಸಿಬಿಐ ಅಧಿಕಾರಿಗಳು ದಾಖಲಿಸಿರುವ ಎಫ್ಐಆರ್ ಆಧರಿಸಿ ಇಡಿ ಅಧಿಕಾರಿಗಳು ಇಂದು 15 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಲಾಲು ಪ್ರಸಾದ್ ಅವರ ಸಂಬಂಧಿಕರ ನಿವಾಸಗಳಲ್ಲೂ ಶೋಧ ನಡೆಸಲಾಗಿದೆ.

ದೆಹಲಿಯಲ್ಲಿರುವ ಲಾಲು ಪ್ರಸಾದ್ ಅವರ ಪುತ್ರಿ ಮಿಸಾ ಭಾರತಿ ಮತ್ತು ಬಿಹಾರದ ಆರ್‌ಜೆಡಿ ನಾಯಕ ಮತ್ತು ಮಾಜಿ ಶಾಸಕ ಅಬು ದೋಜಾನಾ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ ಎಂದು ಮಾಹಿತಿ ಸಿಕ್ಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!