Tuesday, September 2, 2025

ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ: ಆರು ವಾಹನಗಳ ಸೀಜ್

ಹೊಸದಿಗಂತ ವರದಿ,ಚಿತ್ರದುರ್ಗ:

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರ ಚಳ್ಳಕೆರೆ ನಗರದಲ್ಲಿರುವ ಮನೆಯ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ತಂಡ ಮಂಗಳವಾರ ಮತ್ತೆ ದಾಳಿ ನಡೆಸಿದೆ.

ಮಂಗಳವಾರ ಇದ್ದಕ್ಕಿದ್ದಂತೆ ದಿಢೀರ್ ದಾಳಿ ನಡೆಸಿದ ಅಧಿಕಾರಿಗಳ ತಂಡ ವೀರೇಂದ್ರ ಪಪ್ಪಿ ಅವರ ಮನೆಯಲ್ಲಿರುವ ಐಷಾರಾಮಿ ಕಾರುಗಳನ್ನು ಪರಿಶೀಲನೆ ನಡೆಸಿದೆ. ಒಟ್ಟು ಆರು ವಾಹನದಲ್ಲಿ ಇಡಿ ಅಧಿಕಾರಿಗಳು ಆಗಮಿಸಿದ್ದರು.

ವೀರೇಂದ್ರ ಪಪ್ಪಿ ಅವರ ಬ್ಯಾಂಕ್ ಖಾತೆಯಲ್ಲಿರುವ ಹಣ, ಬ್ಯಾಂಕ್ ಖಾತೆಯಲ್ಲಿರುವ ಹಣದ ವರ್ಗಾವಣೆ ಕುರಿತು ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ಮಹೇಂದ್ರ ಕೋಟಕ್ ಸೇರಿದಂತೆ ಮೂರ‍್ನಾಲ್ಕು ಬ್ಯಾಂಕುಗಳಲ್ಲಿ ಹಣ ವರ್ಗಾವಣೆ ಕುರಿತು ಮಾಹಿತಿ ಪಡೆದಿದ್ದಾರೆ.

ಈ ಹಿಂದೆ ದಾಳಿ ನಡೆಸಿದ ಸಂದರ್ಭದಲ್ಲಿ ಕಂತೆ ಕಂತೆ ಹಣ ಸಿಕ್ಕಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಮತ್ತೆ ಇಡು ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಲೆಕ್ಕಪತ್ರ ಪರಿಶೋಧನೆ ನಡೆಸಲಾಗಿದೆ. ಬಳಿಕ ವೀರೇಂದ್ರ ಪಪ್ಪಿ ಅವರಿಗೆ ಸೇರಿದ ಆರು ವಾಹನಗಳನ್ನು ಸೀಜ್ ಮಾಡಿ ತೆಗೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ