ಗೃಹ ಸಚಿವ ಪರಮೇಶ್ವರ್‌ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗೃಹ ಸಚಿವ ಪರಮೇಶ್ವರ್‌ಗೆ ಜಾರಿ ನಿರ್ದೇಶನಾಲಯ ಶಾಕ್‌ ನೀಡಿದೆ. ಪರಮೇಶ್ವರ್‌ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿದೆ.

ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಎಂಜಿನಿಯರಿಂಗ್‌ ಕಾಲೇಜು ಅಲ್ಲದೇ ನೆಲಮಂಗಲದ ಟಿ ಬೇಗೂರು ಬಳಿ ಇರುವ ಕಾಲೇಜು ಮೇಲೂ ಇಡಿ ದಾಳಿ ನಡೆದಿದೆ. 9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ನಾಲ್ಕು ವರ್ಷದ ಹಿಂದೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಆಗ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!