October 17, 2026
Saturday, October 17, 2026
spot_img

ಶಾಸಕ ಎನ್. ಎ ಹ್ಯಾರಿಸ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಡಿ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಾಂತಿನಗರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎನ್‌. ಎ ಹ್ಯಾರಿಸ್‌ ಅವರ ಮನೆ, ಕಚೇರಿ ಇನ್ನಿತರ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದಾರೆ,

ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ ನಿವಾಸ, ಹ್ಯಾರಿಸ್‌ ಅಶೋಕನಗರ ನಿವಾಸ ಸೇರಿ ಐದು ಸ್ಥಳಗಳ ಮೇಲೆ ದಾಳಿ ನಡೆದಿದೆ.

ಬಿಟ್‌ ಕಾಯಿನ್‌ ಆರೋಪಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಜೊತೆ ವ್ಯಾವಹಾರಿಕ ನಂಟು ಹೊಂದಿರುವ ಆರೋಪ ಎದುರಾಗಿದೆ. ಇದರ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.

Must Read