ಆಂಧ್ರ ಮಾಜಿ ಸಿಎಂ ಜಗನ್, ದಾಲ್ಮಿಯಾ ಸಿಮೆಂಟ್ಸ್‌ಗೆ ಇಡಿ ಶಾಕ್: 800 ಕೋಟಿ ಅಸ್ತಿ ಮುಟ್ಟುಗೋಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ದಾಲ್ಮಿಯಾ ಸಿಮೆಂಟ್ಸ್‌ಗೆ (Dalmia Cement) ಸಂಬಂಧಿಸಿದ 803 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ED) ಜಪ್ತಿ ಮಾಡಿದೆ.

ಜಗನ್ ಮೋಹನ್ ರೆಡ್ಡಿ ಅವರ 27.5 ಕೋಟಿ ರೂ. ಮೌಲ್ಯದ ಷೇರುಗಳು ಮತ್ತು ದಾಲ್ಮಿಯಾ ಸಿಮೆಂಟ್ಸ್‌ನ 793.3 ಕೋಟಿ ರೂ. ಮೌಲ್ಯದ ಆಸ್ತಿ ಮತ್ತು ಭೂಮಿಯನ್ನು ತನಿಖಾ ಸಂಸ್ಥೆ ಮುಟ್ಟುಗೋಲು ಹಾಕಿಕೊಂಡಿದೆ.

ಈ ಪ್ರಕರಣವು 2011 ರಲ್ಲಿ ಸಿಬಿಐ ದಾಖಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದೆ. ಇದರಲ್ಲಿ ಡಿಸಿಬಿಎಲ್ ಭಾರತಿ ಸಿಮೆಂಟ್ ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಹೂಡಿಕೆ ಮಾಡಿದೆ. ಜಗನ್ ರೆಡ್ಡಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ದಾಲ್ಮಿಯಾ ಸಿಮೆಂಟ್ಸ್‌ಗೆ ರಾಜ್ಯ ಸರ್ಕಾರದಿಂದ ಅನುಕೂಲಕರ ಒಪ್ಪಂದಗಳನ್ನು ನೀಡಲಾಗಿತ್ತು. ಇದಕ್ಕೆ ಪ್ರತಿಯಾಗಿ, ಕಂಪನಿಯಿಂದ ಗಣನೀಯ ಹಣವನ್ನು ವೈಎಸ್‌ಆರ್ ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆಯಾಗಿ ಅಥವಾ ಇತರ ರೂಪದಲ್ಲಿ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರಕರಣವು 2019ರಿಂದ ತನಿಖೆಯಲ್ಲಿದ್ದು, ಕೇಂದ್ರೀಯ ತನಿಖಾ ಸಂಸ್ಥೆಯಾದ ಸಿಬಿಐ ಕೂಡ ಇದೇ ಆರೋಪಗಳ ಕುರಿತು ಪ್ರತ್ಯೇಕ ತನಿಖೆ ನಡೆಸುತ್ತಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!