ಸಂಸತ್ತಿನಲ್ಲಿರುವಾಗಲೇ ಇಡಿ ಸಮನ್ಸ್ ಬಂತು: ಮಲ್ಲಿಕಾರ್ಜುನ ಖರ್ಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಸಂಸತ್ ಅಧಿವೇಶನದಲ್ಲಿ ಭಾಗವಹಿಸಿದ್ದ ವೇಳೆ ಜಾರಿ ನಿರ್ದೇಶನಾಲಯ(ಇಡಿ)ಯಿಂದ ಸಮನ್ಸ್ ಸ್ವೀಕರಿಸಿರುವುದಾಗಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಗುರುವಾರ ಬಹಿರಂಗಪಡಿಸಿದ್ದಾರೆ.

“ನನಗೆ ಇಡಿ ಸಮನ್ಸ್ ಬಂದಿದೆ, ಅವರು ನನಗೆ ಮಧ್ಯಾಹ್ನ 12.30 ಕ್ಕೆ ಕರೆ ಮಾಡಿದರು. ನಾನು ಕಾನೂನು ಪಾಲಿಸಲು ಬಯಸುತ್ತೇನೆ, ಆದರೆ ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗ ಅವರು ಕರೆಸುವುದು ಸರಿಯೇ? ಸೋನಿಯಾ ಗಾಂಧಿ ಮತ್ತು ರಾಹುಲ್ ಅವರ ನಿವಾಸಗಳಿಗೆ ಪೊಲೀಸರು ಘೇರಾವ್ ಮಾಡುವುದು ಸರಿಯೇ?” ಎಂದು ರಾಜ್ಯ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮುಂದುವರೆದು “ಇದಕ್ಕೆಲ್ಲ ನಾವು ಹೆದರುವುದಿಲ್ಲ. ಎಲ್ಲವನ್ನೂ ಎದುರಿಸಲು ಸಿದ್ಧರಿದ್ದೇವೆ” ಎಂದಿದ್ದಾರೆ.

ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯ ಅಕ್ರಮ ಹಣವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಾರಿ ನಿರ್ದೇಶನಾಲಯವು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿದೆ. ಈ ಸಂಬಂಧ ಈಗಾಗಲೇ ಕಾಂಗ್ರೆಸ್‌ ನಾಯಕಿ ಸೋನಿಯಾಗಾಂಧಿ ಹಾಗೂ ಯುವನಾಯಕ ರಾಹುಲ್‌ ಗಾಂಧಿಯವರು ಇಡಿ ವಿಚಾರಣೆಗೆ ಹಾಜರಾಗಿದ್ದರು.

ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತದೆ ಎಂದು ಕಾಂಗ್ರೆಸ್‌ ಸದಸ್ಯರು ಕೋಲಾಹಲ ಸೃಷ್ಟಿಸಿದ್ದರಿಂದ ಗುರುವಾರದ ರಾಜ್ಯಸಭಾ ಕಲಾಪಕ್ಕೆ ಅಡ್ಡಿ ಉಂಟಾಯಿತು. ರಾಜಕೀಯ ಉದ್ದೇಶಗಳಿಗೆ ಆಡಳಿತಾರೂಢ ಸರ್ಕಾರವು ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹರಿಹಾಯ್ದರು. .

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!