ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ದಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲೀ ಎಂಬಲ್ಲಿರುವ ಟಿಎಂಸಿ ನಾಯಕ ಶೇಖ್ ಶಾಜಹಾನ್ ಅವರ ಮನೆಯಲ್ಲಿ ಶೋಧಕ್ಕೆ ಮುಂದಾಗಿದ್ದ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ಮೆಹಬೂಬ್ ಮುಲ್ಲಾ ಮತ್ತು ಸುಕೋಮಲ್ ಸರ್ದಾರ್ ಎಂದು ಗುರುತಿಸಲಾಗಿದೆ.
ವಿಡಿಯೊ ದೃಶ್ಯಾವಳಿಗಳನ್ನು ಆಧರಿಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಬಸಿರ್ಹತ್ ಎಸ್‌ಪಿ ಜೋಬಿ ಥಾಮಸ್ ತಿಳಿಸಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮೂರು ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಥಾಮಸ್ ವಿವರಿಸಿದ್ದಾರೆ.
ಪಡಿತರ ವಿತರಣೆಯಲ್ಲಿ ನಡೆದಿರುವ ಹಗರಣ ಸಂಬಂಧ ಇ.ಡಿ ಅಧಿಕಾರಿಗಳು ಜನವರಿ 5ರಂದು ಏಕಕಾಲದಲ್ಲಿ ಪಶ್ಚಿಮ ಬಂಗಾಳದ 15 ಕಡೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳ ತಂಡವೊಂದು ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲೀ ಎಂಬಲ್ಲಿರುವ ಟಿಎಂಸಿ ನಾಯಕ ಶೇಖ್ ಶಾಜಹಾನ್ ಅವರ ಮನೆಯಲ್ಲಿ ಶೋಧಕ್ಕೆ ಮುಂದಾಗಿದ್ದರು.ಇ.ಡಿ ಅಧಿಕಾರಿಗಳು ಶಾಜಹಾನ್ ಮನೆಗೆ ಬಂದ ಸುದ್ದಿ ತಿಳಿಯುತ್ತಿದ್ದಂತೆಯೇ ಅವರ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದರು.ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಟಿಎಂಸಿ ಬೆಂಬಲಿಗರು ಮೊದಲು ಇ.ಡಿ ಅಧಿಕಾರಿಗಳು ಮತ್ತು ಅವರ ಭದ್ರತೆಗೆ ಬಂದಿದ್ದ ಸಿಆರ್‌ಪಿಎಫ್ ಸಿಬ್ಬಂದಿಗೆ ಘೇರಾವ್ ಹಾಕಿದ್ದರು. ಆ ಬಳಿಕ ಏಕಾಏಕಿ ಹಲ್ಲೆ ನಡೆಸಿದ್ದರು.