ನ್ಯಾಯಾಲಯದ ಮೇಲೆ ಪ್ರಭಾವ ಬೀರಲು ED ಯತ್ನಿಸುತ್ತಿದೆ: ಸಿಎಂ ಸಿದ್ದು ಆರೋಪ

ಹೊಸದಿಗಂತ ಮಂಡ್ಯ :

ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆಗೆ ಬರುವ ಮುನ್ನವೇ ಇಡಿಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಕೆ.ಆರ್.ಪೇಟೆ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡಿಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು , ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಕಿಡಿಕಾರಿದರು.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ ನಮ್ಮ ಅರ್ಜಿ ಹೈಕೋರ್ಟ್‌ನಲ್ಲಿ ವಿಚಾರಣೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದು ಆರೋಪಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!