ಸಿದ್ದರಾಮಯ್ಯರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಇಡಿ ಯತ್ನ: ಯತೀಂದ್ರ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯಈಗಾಗಲೇ ಅನೇಕ ಸೈಟ್​ಗಳನ್ನು ಜಪ್ತಿ ಮಾಡಿದೆ. ಇದೀಗ, ಇಡಿ ತಾತ್ಕಾಲಿಕ ಜಪ್ತಿ ಆದೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಉಲ್ಲೇಖವಾಗಿದೆ ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿದೆ.

ಈ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಪ್ರತಿಕ್ರಿಯಿಸಿ, ಸಿದ್ದರಾಮಯ್ಯರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಇಡಿ ಈ ರೀತಿ ಮಾಡುತ್ತಿದೆ ಎಂದಿದ್ದಾರೆ.

ಮುಡಾ ನಮ್ಮ ಜಮೀನನ್ನು ಅನಧಿಕೃತವಾಗಿ ವಶಪಡಿಸಿಕೊಂಡಿತ್ತು. ಅದಕ್ಕೆ ಬದಲಿಯಾಗಿ ನಮಗೆ ನಿವೇಶನ ಕೊಟ್ಟಿದ್ದರು. ಭೂಸ್ವಾಧಿನಪಡಿಸಿಕೊಂಡ ಭೂಮಿಯನ್ನು ರೈತರಿಗೆ ನಿವೇಶನ ಕೊಟ್ಟಿದ್ದಾರೆ. ಮುಡಾ ಸದಸ್ಯರು ಇದರಲ್ಲಿ ಭಾಗಿಯಾಗಿದ್ದಾರೆ. ಇದಕ್ಕೂ ನಮ್ಮ 14 ನಿವೇಶನಗಳಿಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!