ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ, ಇಡಿ ಇಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಲಿದೆ. ಸಿಎಂ ಕೇಜ್ರಿವಾಲ್ ಬೆಳಗ್ಗೆ 11 ಗಂಟೆಗೆ ಇಡಿ ಕಚೇರಿಗೆ ಹಾಜರಾಗಲಿದ್ದು, ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದಾರೆ.
ತನಿಖೆಗೆ ಕರೆ ನೀಡಿರುವ ಇಡಿ, ಸಿಎಂ ಅವರನ್ನು ಬಂಧಿಸಲು ಹುನ್ನಾರ ನಡೆಯುತ್ತಿದೆ. ಕೇಂದ್ರದಲ್ಲಿರುವ ಬಿಜೆಪಿ ದೆಹಲಿಯಲ್ಲಿ ಎಎಪಿ ಪಕ್ಷಕ್ಕೆ ಹಾನಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಎಎಪಿ ನಾಯಕರು ಆರೋಪಿಸಿದ್ದಾರೆ. ಪ್ರತಿಭಟನೆ ನಡೆಯುವ ಸಾಧ್ಯತೆಗಳಿರುವುದರಿಂದ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಮದ್ಯದ ಹಗರಣ ಪ್ರಕರಣದಲ್ಲಿ ಸಿಎಂ ಕೇಜ್ರಿವಾಲ್ ಅವರನ್ನು ಸಿಬಿಐ ಏಪ್ರಿಲ್ ತಿಂಗಳಿನಲ್ಲಿಯೇ ಪ್ರಶ್ನಿಸಿತ್ತು. ದೆಹಲಿ ಮದ್ಯ ನೀತಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಯನ್ನು ಚುರುಕುಗೊಳಿಸಿರುವ ಇಡಿ, ಈಗಾಗಲೇ ಹಲವರನ್ನು ಬಂಧಿಸಿದೆ. ಇದೀಗ ನವೆಂಬರ್ 2ರಂದು ವಿಚಾರಣೆಗೆ ಬರುವಂತೆ ದೆಹಲಿ ಸಿಎಂಗೂ ಅಕ್ಟೋಬರ್ 31ರಂದು ನೋಟಿಸ್ ಕಳುಹಿಸಲಾಗಿತ್ತು.