ಹೊಸದಿಗಂತ ವರದಿ,ಮಂಗಳೂರು:
ರಾಜಧಾನಿ ಬೆಂಗಳೂರಿಗೆ ಸಂಪರ್ಕ ಒದಗಿಸುವ ಎಡಕುಮೇರಿ- ಕಡಗರವಳ್ಳಿ ನಡುವೆ ಭೂಕುಸಿತ ಉಂಟಾದ ಹಿನ್ನೆಲೆಯಲ್ಲಿ ರೈಲ್ವೆ ಸಂಚಾರ ದುಸ್ತರವಾಗಿದೆ. ಇಲ್ಲಿ ಹಾನಿಗೊಳಗಾದ ರೈಲ್ವೆ ಹಳಿ ದುರಸ್ತಿ ಕಾರ್ಯ ಕ್ಷಿಪ್ರಗತಿಯಲ್ಲಿ ಸಾಗುತ್ತಿದೆ.
ಆದರೆ ಬೃಹತ್ ಗಾತ್ರದಲ್ಲಿ ಬಿದ್ದಿರುವ ಕಲ್ಲು ಮಣ್ಣುಗಳ ತೆರವಿಗೆ ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬೃಹತ್ ಯಂತ್ರೋಪಕರಣಗಳ ಮೂಲಕ 300ಕ್ಕೂ ಅಧಿಕ ಕಾರ್ಮಿಕರ ತಂಡ ಮಣ್ಣು ತೆರವು ಕಾರ್ಯದಲ್ಲಿ ನಿರತವಾಗಿದೆ. ಒಂದೆಡೆ ನಿರಂತರವಾಗಿ ಸುರಿಯುತ್ತಿರುವ ಮಳೆ ಮಣ್ಣು ತೆರವಿಗೆ ಅಡ್ಡಿಯಾಗಿದೆ.