Wednesday, December 7, 2022

Latest Posts

ನಾಳೆ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳ ಪೀಠಾರೋಹಣದ ದ್ವಿತೀಯ ವರ್ಷಾಚರಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜಗದ್ಗುರುಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀಮದ್ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಪೀಠಾರೋಹಣದ ದ್ವಿತೀಯ ವರ್ಷಾಚರಣೆ ಅಕ್ಟೊಬರ್ 7ರಂದು ಜರಗಲಿರುವುದು.
ಬೆಳಗ್ಗೆ 7 ಗಂಟೆಗೆ ಬೆಳಗ್ಗಿನ ಪೂಜೆ, 9 ಗಂಟೆಗೆ ಕಿಶೋರ್ ಪೆರ್ಲ ಮತ್ತು ಬಳಗದವರಿಂದ ಭಜನಾ ಸಂಕೀರ್ತನೆ, 11 ಗಂಟೆಗೆ ಹವನ ಪೂರ್ಣಾಹುತಿ, 11.15ಕ್ಕೆ ನಡೆಯುವ ಸಭಾಕಾರ್ಯಕ್ರಮದಲ್ಲಿ ಉಡುಪಿ ಕಾಣಿಯೂರು ಮಠದ ಪರಮಪೂಜ್ಯ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದಂಗಳವರು ಆಶೀರ್ವಚನವನ್ನು ನೀಡಲಿದ್ದಾರೆ. ಕಾಸರಗೋಡು ಸಂಸದ ರಾಜಮೋಹನ ಉಣ್ಣಿತ್ತಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗದ ನಿಕಟಪೂರ್ವ ಅಧ್ಯಕ್ಷ ಡಾ. ಟಿ. ಶ್ಯಾಮ್ ಭಟ್ ಉಪಸ್ಥಿತರಿರಲಿದ್ದಾರೆ. ಇದೇ ಸಂದರ್ಭ ಸಂಗೀತ ಮತ್ತು ಮೃದಂಗ ವಿದ್ವಾಂಸ ವಿದ್ವಾನ್ ಕೆ.ಬಾಬು ರೈ ಅವರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಭೋಜನ ಪ್ರಸಾದದೊಂದಿಗೆ ಕಾರ್ಯಕ್ರಮ ಸಂಪನ್ನವಾಗಲಿದೆ ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!