Sunday, June 4, 2023

Latest Posts

ಕೋವಿಡ್ ವರದಿಯನ್ನು ಎಡಿಟ್ ಮಾಡಿ ಸಿಕ್ಕಿಬಿದ್ದ ವ್ಯಕ್ತಿ!

ಹೊಸದಿಗಂತ ವರದಿ,ಮೈಸೂರು:

ಕೋವಿಡ್ ವರದಿಯನ್ನು ಎಡಿಟ್ ಮಾಡಿಕೊಂಡು ಬಂದ ವ್ಯಕ್ತಿಯೊಬ್ಬ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ನಲ್ಲಿ ನಡೆದಿದೆ.
ನೆರೆ ಕೇರಳ ರಾಜ್ಯದಲ್ಲಿ ಕೊರೋನಾ ಹಾಗೂ ಒಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನ ಹೊರ ರಾಜ್ಯದಿಂದ ಬರುವವರು ಆರ್‌ಟಿಪಿಸಿಆರ್ ಟೆಸ್ಟ್ ವರದಿಯನ್ನು ತರುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದ್ದು, ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಕೇರಳ ಗಡಿಗೆ ಹೊಂದಿಕೊAಡಿರುವ ಮೈಸೂರು ಜಿಲ್ಲೆಯ ಬಾವಲಿ ಚೆಕ್ ಪೋಸ್ಟ್ನಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದೆ.
ಆರೋಗ್ಯ ಹಾಗೂ ಪೊಲೀಸ್ ಸಿಬ್ಬಂದಿ ಹೊರ ರಾಜ್ಯದಿಂದ ಬರುತ್ತಿರುವ ಪ್ರತಿಯೊಬ್ಬ ಸವಾರರನ್ನ ತಪಾಸಣೆ ಮಾಡುತ್ತಿದ್ದಾರೆ. ಬಸ್ ಹಾಗೂ ಇತರೆ ವಾಹನಗಳಲ್ಲಿ ಬರುವ ಪ್ರತಿಯೊಬ್ಬರಿಗೂ ತಪಾಸಣೆ ನಡೆಸಲಾಗುತ್ತಿದೆ. ನಕಲು ವರದಿ ತಂದು ರಾಜ್ಯಕ್ಕೆ ಬರಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರನ್ನು ಕ್ಯೂ ಆರ್ ಕೋಡ್ ಸ್ಕಾ÷್ಯನ್ ಮೂಲಕ ತಪಾಸಣೆ ನಡೆಸುತ್ತಿದ್ದಾರೆ. ರಾಜ್ಯದಿಂದ ಒಂದೇ ಕಾರಿನಲ್ಲಿ ಮೂವರು ಬಂದಿದ್ದಾರೆ. ಇದರಲ್ಲಿ ಒಬ್ಬರ ರಿಪೋರ್ಟ್ನ ಎಡಿಟ್ ಮಾಡಿಕೊಂಡು ಬಂದಿದ್ದಾರೆ. ಸ್ಕಾ÷್ಯನ್ ಮಾಡಿದಾಗ ಒಂದೇ ವರದಿ ಹೆಸರನ್ನು ಎಡಿಟ್ ಮಾಡಿಕೊಂಡು ಬಂದಿರುವುದು ಪತ್ತೆಯಾಗಿದೆ. ಆತನನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ವಾಪಾಸ್ ಕಳುಹಿಸಿದ್ದಾರೆ. ವರದಿ ಇಲ್ಲದೆ ಬರುವಂತ ಪ್ರಯಾಣಿಕರನ್ನ ಸಿಬ್ಬಂದಿಗಳು ವಾಪಸ್ಸು ಕಳುಹಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!