ಸಾರ್ವಜನಿಕರಿಗೆ ರಾಷ್ಟ್ರಧ್ವಜ ನಿರ್ವಹಣೆ ಬಗ್ಗೆ ತಿಳುವಳಿಕೆ ನೀಡಿ: ಅಂಬರೀಷ್‌ ಬಟನಾಪುರೆ

ಹೊಸದಿಗಂತ ವರದಿ ಬೀದರ್:
ಹರ್ ಘರ್ ತಿರಂಗಾ ಅಭಿಯಾನ ವೇಳೆ ಸಾರ್ವಜನಿಕರಿಗೆ ರಾಷ್ಟ್ರ ಧ್ವಜ ನಿರ್ವಹಣೆಯ ತಿಳಿವಳಿಕೆಯನ್ನೂ ನೀಡಬೇಕು ಎಂದು ವೀರಶೈವ ಲಿಂಗಾಯತ ಮಹಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಅಂಬರೀಷ್ ಬಟನಾಪುರೆ ಮನವಿ ಮಾಡಿದ್ದಾರೆ.
ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿ ಮನೆಗಳ ಮೇಲೂ ರಾಷ್ಟ್ರ ಧ್ವಜ ಹಾರಿಸುವ ಅಭಿಯಾನ ಹಮ್ಮಿಕೊಂಡಿರುವುದು ಸಂತಸದ ಸಂಗತಿ. ಆದರೆ, ಅಭಿಯಾನದ ನಂತರ ರಾಷ್ಟ್ರ ಧ್ವಜಕ್ಕೆ ಅಗೌರವ ಆಗದಂತೆ ನೋಡಿಕೊಳ್ಳುವುದೂ ಎಲ್ಲರ ಜವಾಬ್ದಾರಿಯಾಗಿದೆ. ಹೀಗಾಗಿ ರಾಷ್ಟ್ರ ಧ್ವಜವನ್ನು ಎಲ್ಲೆಂದರಲ್ಲಿ ಬೀಸಾಡದೆ, ಗೌರವಪೂರ್ವಕವಾಗಿ ನಿರ್ವಹಿಸುವ ಬಗ್ಗೆ ಅರಿವು ಮೂಡಿಸುವ ಅಗತ್ಯ ಇದೆ ಎಂದು ಹೇಳಿದ್ದಾರೆ.
ಸಂಘ ಸಂಸ್ಥೆಗಳು ಧ್ವಜ ವಿತರಣೆಯ ಸಂದರ್ಭದಲ್ಲಿ ನಿರ್ವಹಣೆಯ ಕುರಿತು ಸಹ ಮಾಹಿತಿ ಕೊಡಬೇಕು. ಜನ ನಾಯಕರು ಹಾಗೂ ಪ್ರಸಿದ್ಧ ವ್ಯಕ್ತಿಗಳಿಂದ ಮಾಧ್ಯಮಗಳಲ್ಲಿ ಈ ಕುರಿತು ಸಂದೇಶ ನೀಡಬೇಕು ಎಂದು ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!