ಶಿಕ್ಷಣ, ಜಾಗೃತಿಯಿಂದಲೇ ಸಮುದಾಯಗಳ ಏಳಿಗೆ ಸಾಧ್ಯ: ಸಚಿವ ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ: ಶಿಕ್ಷಣದ ಕೊರತೆ, ಮೂಢನಂಬಿಕೆ, ಅಂಧಶ್ರದ್ಧೆ ಸೇರಿದಂತೆ ಹಲವು ಕಾರಣಗಳಿಂದ ದಶಕಗಳ ಕಾಲ ಹಿಂದುಳಿದಿದ್ದ ಸಮುದಾಯಗಳು ಇದೀಗ ಜಾಗೃತಿ ಹಾಗೂ ಶಿಕ್ಷಣದ ಮೂಲಕ ಮುಖ್ಯವಾಹಿನಿಗೆ ಬರುತ್ತಿವೆ. ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಮುಂದೆ ಬರಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕುಮಾರಗಂಧರ್ವ ರಂಗಮಂದಿರದಲ್ಲಿ ಮಂಗಳವಾರ ಬೆಳಗಾವಿ ಜಿಲ್ಲಾ ಮಟ್ಟದ ವಾಲ್ಮೀಕಿ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಬೆಳಗಾವಿ, ಖಾನಾಪುರ ಹಾಗೂ ಮಹಾರಾಷ್ಟ್ರದ ಗಡಿ ಪ್ರದೇಶಗಳಲ್ಲಿ … Continue reading ಶಿಕ್ಷಣ, ಜಾಗೃತಿಯಿಂದಲೇ ಸಮುದಾಯಗಳ ಏಳಿಗೆ ಸಾಧ್ಯ: ಸಚಿವ ಸತೀಶ್ ಜಾರಕಿಹೊಳಿ