ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಿಗೆ 6,000 ಅತಿಥಿ ಶಿಕ್ಷಕರ ನೇಮಕಾತಿ: ಶಿಕ್ಷಣ ಇಲಾಖೆ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದೆಲ್ಲೆಡೆ ಸರ್ಕಾರಿ ಪ್ರೌಢಶಾಲೆಗಳಿಗೆ 6 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 27 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶಿಸಿದ ಬೆನ್ನಲ್ಲೇ ಇದೀಗ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 6 ಸಾವಿರ ಅತಿಥಿ ಶಿಕ್ಷಕರ ನೇಮಿಸಿಕೊಳ್ಳಲು ಶಿಕ್ಷಣ ಇಲಾಖೆಯು ಜಿಲ್ಲಾ ಉಪನಿರ್ದೇಶಕರಿಗೆ ಸೂಚನೆ ಕೊಟ್ಟಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 6 ಸಾವಿರ ಅತಿಥಿ ಶಿಕ್ಷಕರನ್ನು ಶಾಲಾ ಆರಂಭದ ದಿನವೇ ನೇಮಿಸಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!