ಹೊಸದಿಗಂತ ವರದಿ, ಬೆಳಗಾವಿ:
ಶಿಕ್ಷಣ ಪಡೆಯುವುದು ಮಾತ್ರವಲ್ಲದೇ ಸಕಾರಾತ್ಮಕ ನಿರ್ಣಯ ಪಡೆಯುವ ಛಲ ವಿದ್ಯಾರ್ಥಿಗಳು ಹೊಂದಿರಬೇಕು. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಅತಿ ಅವಶ್ಯಕವಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.
ಬುಧವಾರ ಇಲ್ಲಿನ ಸುವರ್ಣ ವಿಧಾನ ಸೌಧದ ಸೆಂಟ್ರಲ್ ಹಾಲ್ ನಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವದಲ್ಲಿ ಮಾತನಾಡಿದರು.
ವ್ಯಕ್ತಿ ಹುಟ್ಟಿದಾಗಿನಿಂದ ಸಾಯುವ ವರೆಗೂ ಶಿಕ್ಷಣದ ಕಲಿಕಾ ಹಂತದಲ್ಲಿ ಇದ್ದರೆ ಹೊಸ ಹೊಸ ಪರಿಸ್ಥಿತಿ ಅಧ್ಯಯನವಾಗುತ್ತದೆ. ಕೇಂದ್ರ ಸರಕಾರದ ಆತ್ಮ ನಿರ್ಭರ್ ಭಾರತಕ್ಕೆ ಶಿಕ್ಷಣ ಅತ್ಯವಶ್ಯಕವಾಗಿದೆ ಎಂದರು.
ಶೈಕ್ಷಣಿಕ ಕೊನೆಯ ಘಟ ವಿದ್ಯಾರ್ಥಿಗಳಿಗೆ ಪ್ರಮುಖವಾಗುರುತ್ತದೆ. ದೇಶದಲ್ಲಿ ಸ್ವಾತಂತ್ರ್ಯ ದೊರೆಯುವ ಮೊದಲಿನಿಂದಲೂ ಘಟಿಕೋತ್ಸವಗಳು ನಡೆಯುತ್ತಿವೆ ಎಂದು ಹೇಳಿದರು.
ಸ್ನಾತಕೋತ್ತರ ಪದವಿ ಪಡೆದಿರುವ ವಿದ್ಯಾರ್ಥಿಗಳು ನಿರಂತರ ಸಂಶೋಧನೆ ಮಾಡುವುದರ ಮೂಲಕ ಏಕ್ ಭಾರತ ಶ್ರೇಷ್ಠ ಭಾರತ ಎನ್ನುವ ಹಾಗೆ ಮಾಡಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದರು.
ಆರ್ ಸಿಯು ಕುಲಪತಿ ಪ್ರೊ. ರಾಮಚಂದ್ರಗೌಡ, ಕುಲಸಚಿವ ಪ್ರೊ. ಬಸವರಾಜ ಪದ್ಮಶಾಲಿ ಸೇರಿದಂತೆ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.