ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಭಾರೀ ಮುಜುಗರ, ಇದಕ್ಕೆ ಕಾರಣ ಯಾರು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿದ್ಯಾರ್ಥಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ವೇಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಭಾರೀ ಮುಜುಗರವಾಗಿದೆ.

ಇಂದು ವಿಧಾನಸೌಧದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ NEET, JEE, CET ಉಚಿತ ಆನ್‌ಲೈನ್ ಕೋಚಿಂಗ್ ಪ್ರಾರಂಭಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ವೇಳೆ ಮಧು ಬಂಗಾರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ವಿದ್ಯಾರ್ಥಿಯೊಬ್ಬ ನೇರವಾಗಿ ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಕೇಳಿದ ಮಧು ಬಂಗಾರಪ್ಪ, “ಯಾರೋ ಅದು ಹೇಳಿದ್ದು, ಏನಂತ ಹೇಳಿದ್ದು? ನಾನೇನು ಉರ್ದು ಮಾತಾಡಿದ್ನಾ? ಕನ್ನಡದಲ್ಲೇ ಮಾತನಾಡಿದ್ದು ಎಂದು ಗರಂ ಆದರು, ಆಗ ಪಕ್ಕದಲ್ಲಿ ಕುಳಿತಿದ್ದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಸಿಂಧೂ ಬಿ ರೂಪೇಶ್ ಮತ್ತು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಅವರಲ್ಲಿ, ಯಾರು ನೋಡಿ ರೆಕಾರ್ಡ್ ಮಾಡಿ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್‌ನಲ್ಲಿ ಹಲವು ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದು ಸದ್ಯಕ್ಕೆ ಈ ರೀತಿ ಹೇಳಿದ ವಿದ್ಯಾರ್ಥಿ ಯಾರು ಎನ್ನುವುದು ತಿಳಿದುಬಂದಿಲ್ಲ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!