ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆಯಂದು ಇ- ಲೈಬ್ರರಿಗೆ ಮರು ಚಾಲನೆ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದ ಡಿಎಆರ್ ಸಭಾಂಗಣದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇ-ಲೈಬ್ರರಿಯನ್ನು ಇನ್ನಷ್ಟು ಉತ್ತಮಗೊಳಿಸಲಾಗುವುದು. ಇ- ಲೈಬ್ರರಿಯನ್ನು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಹತ್ತಿರ ಮಾಡುವ ಉದ್ದೇಶವನ್ನು ಹೊಂದಲಾಗಿದೆ. ಇದರಿಂದ ಇದರಲ್ಲಿ ಹಲವು ಮಾರ್ಪಾಡುಗಳನ್ನು ಮಾಡಲಾಗುತ್ತದೆ. ಇ- ಲೈಬ್ರರಿಯನ್ನು ಈಗ ಗ್ರಂಥಾಲಯಯಲ್ಲಿಯೇ ಹೋಗಿ ನೋಡಬೇಕಿತ್ತು. ಈಗ ಮೊಬೈಲ್ನಲ್ಲಿಯೇ ನೋಡುವಂತಹ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಉಸ್ತುವಾರಿ ಸಚಿವನಾಗಿ ಪ್ರಥಮ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾಗಿದ್ದೇನೆ. ನಗರದ ಪೊಲೀಸ್ ಡಿಎಆರ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನಡೆಸಲಾಯಿತು. ಸ್ವಾತಂತ್ರ್ಯ ಪುಕ್ಸಟ್ಟೆ ಬರಲಿಲ್ಲ. ಹೋರಾಟ, ಜೀವದಾನ ಮಾಡಿ ನೂರಾರು ವರ್ಷಗಳ ಹೋರಾಟದಿಂದ ಸ್ವಾತಂತ್ರ್ಯ ಪಡೆಯಲಾಗಿದೆ ಎಂದರು.
ಹೈಸ್ಕೂಲ್ ಮಕ್ಕಳಿಗೆ ಮೊಟ್ಟೆ ವಿತರಣಾ ಕಾರ್ಯಕ್ರಮ
ಆಗಸ್ಟ್ 18 ರಂದು ಹೈಸ್ಕೂಲ್ ಮಕ್ಕಳಿಗೆ ವಾರದಲ್ಲಿ ಎರಡು ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ. ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಚಿಕ್ಕಿ ಹಾಗೂ ಬಾಳೆಹಣ್ಣು ನೀಡಲಾಗುವುದು. ಇದರ ಸದುಪಯೋಗವನ್ನು 60 ಲಕ್ಷ ಮಕ್ಕಳು ಪಡೆಯಲಿದ್ದಾರೆ ಎಂದು ಹೇಳಿದರು.