Tuesday, July 5, 2022

Latest Posts

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ ಪರಿಶೀಲಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ರಾಮನಗರ:

ಇಂದು ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವರಾದ ಎಸ್. ಸುರೇಶ್ ಕುಮಾರ್ ಅವರು ಬಿಡದಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ ನಗರದ ಅನೇಕ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಬಸವೇಶ್ವರ ಪ್ರೌಢಶಾಲೆ, ರಾಮನಗರದ ಶಾಂತಿನಿಕೇತನ ಶಾಲೆ, ಭಾರತೀಯ ಸಾಂಸ್ಕೃತಿ ವಿದ್ಯಾಪೀಠ, ಸರ್ಕಾರಿ ಪದವಿ ಪೂರ್ವ ಕಾಲೇಜು, ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸೆಂಟ್ ಆನ್ಸ್ ಪ್ರೌಢಶಾಲೆ ಹಾಗೂ ಚನ್ನಪಟ್ಟಣದ ಚೆಕ್ಕೆರೆಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದರು.

ಪರಿಶೀಲನೆಯ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಪರೀಕ್ಷೆ ಬರೆಯಲು ಯಾವುದೇ ತೊಂದರೆಯಾಗದಂತೆ ವ್ಯವಸ್ಥೆಯಾಗಬೇಕು. ಪರೀಕ್ಷಾ ನೋಂದಣಿ ಸಂಖ್ಯೆ ವಿದ್ಯಾರ್ಥಿಗಳಿಗೆ  ಗೋಚರವಾಗುವ ರೀತಿ ಪ್ರದರ್ಶನವಾಗಬೇಕು. ಈ ಬಾರಿ ಪರೀಕ್ಷೆ ಒ.ಎಮ್.ಆರ್  ಶೀಟ್ ನಲ್ಲಿ ಇರುವ ಹಿನ್ನೆಲೆಯಲ್ಲಿ ಪರೀಕ್ಷಾ ನೋಂದಣಿ ಸಂಖ್ಯೆ ಸರಿಯಾಗಿ ವಿದ್ಯಾರ್ಥಿಗಳು ನಮೂದಿಸಿರುವ ಬಗ್ಗೆ ಪರೀಕ್ಷಾ ಮೇಲ್ವಿಚಾರಕರು ಪರಿಶೀಲಿಸುವಂತೆ ತಿಳಿಸಿದರು.

ಈ ಸಂದಭ೯ದಲ್ಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿವಾ೯ಹಣಾಧಿಕಾರಿ ಇಕ್ರಂ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss