ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳು ಮತ್ತು ಇತರೆ ಶಿಕ್ಷಣ ಸಂಸ್ಥೆಗಳಿಗೆ ಧರ್ಮವನ್ನು ಸೂಚಿಸುವ ಹೆಸರಿಡುವ ಹಾಗಿಲ್ಲ ಎಂದು ಕೇರಳ ಸರಕಾರ ತಿಳಿಸಿದೆ.
ಈ ಕುರಿತು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಸರ್ಕಾರ ನಡೆಸುವ ಶಿಕ್ಷಣ ಸಂಸ್ಥೆಗಳು ಜಾತ್ಯತೀತವಾಗಿ ಉಳಿಯಬೇಕು. ಸಮಾನತೆ ಮತ್ತು ಎಸಾಂವಿಧಾನಿಕ ಮೌಲ್ಯಗಳನ್ನು ಪ್ರತಿಬಿಂಬಿಸಬೇಕು.ಹಾಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಕುರಿತು ನ್ಯಾ.ಜೆ.ಬಿ.ಕೋಶಿ ಆಯೋಗ ಸಲ್ಲಿಸಿದ ವರದಿಯನ್ನು ಸಚಿವ ಸಂಪುಟ ತಾತ್ವಿಕವಾಗಿ ಒಪ್ಪಿದೆ.
ಇನ್ನು ಈ ಹೊಸ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನ್ವಯವಾಗಲಿದ್ದು, ಈಗ ಇರುವ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಹೆಸರುಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸರ್ಕಾರಿ ಮೂಲಗಳು ಸ್ಪಷ್ಟಪಡಿಸಿವೆ.



