ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ಶಿಕ್ಷಣ ತಜ್ಞ, ಪಿಇಎಸ್ (ಪೀಪಲ್ಸ್ ಎಜುಕೇಶನ್ ಸೊಸೈಟಿ) ಶಿಕ್ಷಣ ಸಂಸ್ಥೆಯ ಸ್ಥಾಪಕ ಎಂಆರ್ ದೊರೆಸ್ವಾಮಿ( 88) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ದೊರೆಸ್ವಾಮಿ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದು,ಇಂದು ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಪೊಲೀಸ್ ಗೌರವಗಳೊಂದಿಗೆ ಅಂತ್ಯ ಸಂಸ್ಕಾರಕ್ಕೆ ಸರ್ಕಾರ ಸೂಚಿಸಿದೆ. ಇನ್ನು ಡಿಸಿಎಂ ಡಿಕೆ ಶಿವಕುಮಾರ್ ದೊರೆಸ್ವಾಮಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಖುದ್ದು ಅಂತಿಮ ದರ್ಶನ ಪಡೆದಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರು ದೊರೆಸ್ವಾಮಿಯವರ ಅಂತಿಮ ದರುಶನ ಪಡೆದಿದ್ದಾರೆ.