ಹೊಸದಿಗಂತ ಡಿಜಿಟಲ್ ಡೆಸ್ಕ್ :
ಲೋಕಸಭೆ ಚುನಾವಣೆಯಲ್ಲಿ ನಟ ಉಪೇಂದ್ರ ಅವರ ಪ್ರಜಾಕೀಯ ಪಕ್ಷಕ್ಕೆ ಉತ್ತಮ ಬೆಂಬಲ ದೊರೆಯುತ್ತಿಲ್ಲ. ಅತ್ತ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ನಟ ಪವನ್ ಕಲ್ಯಾಣ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಜಯಗಳಿಸಿದ್ದಾರೆ. ಇದರಿಂದ ಈ ವಿಚಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹೋಲಿಕೆ ಮಾಡಲಾಗುತ್ತಿತ್ತು. ಇದೀಗ ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ ಉಪೇಂದ್ರ ಖಾರವಾಗಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ಈ ದಡ್ ನನ್ ಮಗಂಗೇ ಯಾವೋನಾದ್ರ ಇನ್ ಮೇಲೆ ಬುದ್ದಿವಂತಾ ಅಂದ್ರೇ ಅಷ್ಟೇ ಸೆಂದಾಗಿರಕ್ಕಿಲ್ಲಾ ಎಂದು ಎಚ್ಚರಿಸಿದ್ದಾರೆ.
ಈ ಕುರಿತು ಪೋಸ್ಟ್ ಮಾಡಿರುವ ಅವರು, ‘ವಾಹ್ ಮೈ ಡಿಯರ್ ಪ್ರಜಾಪ್ರಭುಗಳೇ ವಾಹ್.. ಉಪೇಂದ್ರ ಸೋಲು ಗೆಲುವು ಬಗ್ಗೆ ತುಂಬಾ ಚಿಂತೆ ಮಾಡ್ತಿದೀರ! ಎಂಥಾ ನಿಸ್ವಾರ್ಥ! ಎಂಥಾ ತ್ಯಾಗ ಮನೋಭಾವ! ನಿಮ್ಮೆಲ್ಲರ ಪಾದಕ್ಕೆ ಅಡ್ ಬಿದ್ದೆ. ಡೋಂಟ್ ವರೀ. ನಾನ್ ಗೆಲ್ಬೇಕು ಅಂತ ಅನ್ನಿಸಿದಾಗ ಯಾವುದಾದರೂ ರಾಜಕೀಯ ಪಕ್ಷ ಸೇರಿ ನೀವ್ ಹೇಳ್ದಾಗೆಲ್ಲಾ ಮಾಡ್ತೀನಿ. ಗೆದ್ದೇ ಗೆಲ್ತೀನಿ. ನೀವ್ ಗೆಲ್ಲೋದ್ ಯಾವಾಗ ಅಂತ ನೀವ್ ಯೋಚನೆ ಮಾಡ್ರಪ್ಪೋ.. ನೆಕ್ಸ್ಟ್ ಎಲೆಕ್ಷನ್ ನಲ್ಲಿ ನನಗ್ ಕೆಲ್ಸಾ ಕೊಡ್ತೀರ ಅಂದ್ರೆ ನಿಲ್ತೀನಿ ಆಗ್ಲೂ ನೀವ್ ಎಮೋಸನಲ್ ಪ್ರಚಾರ ಮಾಡ್ರೀ ಸಭೆ ಸಮಾರಂಭ ಎಲ್ಲಾ ಮಾಡ್ರೀ ಕಷ್ಟ ಪಡ್ರೀ. ಆಮೇಲ್ ಐದು ವರ್ಸ ನೀವೇನ್ ಬೇಕಾದ್ರೂ ಮಾಡ್ಕಳಿ ನಾವ್ ಕೇಳಕ್ ಬರಲ್ಲ ಅಂದ್ರೆ…… ಉಸ್.. ಏನ್ ಬರೀಬೇಕೋ ಗೊತ್ತಾಗ್ತಿಲಿರಪ್ಪೋ ಈ ದಡ್ ನನ್ ಮಗಂಗೇ ಯಾವೋನಾದ್ರ ಇನ್ ಮೇಲೆ ಬುದ್ದಿವಂತಾ ಅಂದ್ರೇ ಅಷ್ಟೇ ಸೆಂದಾಗಿರಕ್ಕಿಲ್ಲಾ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.