ಕರ್ನಾಟಕಕ್ಕೆ ಫೆಂಗಲ್ ಚಂಡಮಾರುತ ಎಫೆಕ್ಟ್: ನಾಳೆ ಈ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಫೆಂಗಲ್ ಚಂಡಮಾರುತದ ಅಬ್ಬರ ತಮಿಳುನಾಡಿನಲ್ಲಿ ಜೋರಾಗಿದ್ದು, ಇದೀಗ ಕರ್ನಾಟಕದ ಮೇಲೂ ಅದ್ರ ಪ್ರಭಾವ ಬಿದ್ದಿದೆ. ಹೀಗಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಮಳೆ ಆಗಿದೆ. ಇತ್ತ ಕೋಲಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಒಂದು ದಿನ ರಜೆ ನೀಡಲಾಗಿದೆ. ಬೆಂಗಳೂರಿನ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ.

ಫೆಂಗಲ್ ಸೈಕ್ಲೋನ್ ಎಫೆಕ್ಟ್​​ನಿಂದಾಗಿ ರಾಜ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣವಿದೆ. ಬೆಳಿಗ್ಗೆಯಿಂದ ಜಿಟಿ ಜಿಟಿ ಮಳೆಯಿಂದಾಗಿ ಕೂಲ್ ಕೂಲ್ ವಾತಾವರಣ ನಿರ್ಮಾಣವಾಗಿದೆ.

ಬೆಂಗಳೂರು ನಗರದ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ
ಆದರೆ ನಗರದಲ್ಲಿ ನಾಳೆ ಎಂದಿನಂತೆಯೇ ಶಾಲಾ ಕಾಲೇಜು ಇರಲಿದೆ. ಈ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್​ ಪ್ರತಿಕ್ರಿಯಿಸಿದ್ದು, ಬೆಂಗಳೂರು ನಗರದ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಇಲ್ಲ. ಮಕ್ಕಳನ್ನು ಎಚ್ಚರಿಕೆಯಿಂದ ಶಾಲೆಗೆ ಕಳುಹಿಸುವಂತೆ ಸೂಚನೆ ನೀಡಿದ್ದಾರೆ.

ಕೋಲಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಜಡಿ ಮಳೆ ಮತ್ತು ವಿಪರೀತ ಚಳಿ ಹಿನ್ನೆಲೆ ಕೋಲಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆದೇಶ ಹೊರಡಿಸಿದ್ದಾರೆ. ನಾಳಿನ ರಜೆಯನ್ನು ಮತ್ತೊಂದು ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸುವಂತೆ ಡಿಸಿ ಅಕ್ರಂ ಪಾಷಾ ಸೂಚನೆ ನೀಡಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!