spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, October 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಡೆಲ್ಟಾ ಪ್ಲಸ್​ ರೂಪಾಂತರಿ ವಿರುದ್ಧ ಕೊವ್ಯಾಕ್ಸಿನ್ ಲಸಿಕೆ ಪರಿಣಾಮಕಾರಿ: ICMR

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಡೆಲ್ಟಾ ಪ್ಲಸ್​ ರೂಪಾಂತರಿ ವೈರಾಣು ವಿರುದ್ಧ ಭಾರತ್​ ಬಯೋಟೆಕ್​ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ಪರಿಣಾಮಕಾರಿ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (Indian Council Of Medical Research)ಯ ಅಧ್ಯಯನ ತಿಳಿಸಿದೆ
ಭಾರತದಲ್ಲ ಮೊದಲು ಪತ್ತೆಯಾಗಿದ್ದ B.1.617.2 ರೂಪಾಂತರಿ ತಳಿಯ ಹಾವಳಿ ಇಂದು ವಿಶ್ವಾದ್ಯಂತ ಹಾವಳಿಯನ್ನೆಬ್ಬಿಸಿದೆ. ಅದ್ರಲ್ಲೂ ಅಮೆರಿಕಾ, ಯೂರೋಪ್, ಚೀನಾ, ಪಾಕಿಸ್ತಾನ ಹೀಗೆ ಎಲ್ಲ ದೇಶಗಳಲ್ಲೂ ಇದರ ಹಾವಳಿ ಮಿತಿ ಮೀರಿದೆ.
ಈ ನಡುವೆ ಭಾರತವೇ ಅಭಿವೃದ್ಧಿ ಪಡಿಸಿ, ಭಾರತದಲ್ಲೇ ತಯಾರಾಗಿರುವ ಕೊವ್ಯಾಕ್ಸಿನ್ ಲಸಿಕೆ ಡೆಲ್ಟಾ ವಿರುದ್ಧವೂ ಎಫೆಕ್ಟಿವ್ ಆಗಿ ಹೊರ ಹೊಮ್ಮಿದೆ. ಐಸಿಎಂಆರ್ ನಡೆಸಿದ ಅಧ್ಯಯನದಲ್ಲಿ ಶೇ.65.2ರಷ್ಟು ಪರಿಣಾಮಕಾರಿಯಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಕೊವ್ಯಾಕ್ಸಿನ್​ ಮೂರು ಹಂತದ ಕ್ಲಿನಿಕಲ್ ಪ್ರಯೋಗ ಆಗದಿದ್ದರೂ ಭಾರತದಲ್ಲಿ ತುರ್ತು ಬಳಕೆಗೆ ಅವಕಾಶ ಪಡೆದಿತ್ತು. ಇತ್ತೀಚೆಗಷ್ಟೇ ಭಾರತ್​ ಬಯೋಟೆಕ್​ ಕಂಪನಿ, ಕೊವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗದ ಫಲಿತಾಂಶ ಘೋಷಿಸಿತ್ತು. ಅದರ ಅನ್ವಯ ಈ ಲಸಿಕೆ ಲಕ್ಷಣ ಸಹಿತ ಕೊವಿಡ್​ 19 ಸೋಂಕಿನ ವಿರುದ್ಧ ಶೇ.77.8ರಷ್ಟು ಪರಿಣಾಮಕಾರಿ ಎಂದು ಹೇಳಲಾಗಿತ್ತು. ಸಂಪೂರ್ಣವಾಗಿ ಭಾರತದಲ್ಲೇ ತಯಾರಾದ ಈ ಲಸಿಕೆ ಸದ್ಯ ಬ್ರೆಜಿಲ್, ಮೆಕ್ಸಿಕೋ, ಫಿಲಿಪೈನ್ಸ್ ಮತ್ತು ಇರಾನ್ ಸೇರಿದಂತೆ 16 ರಾಷ್ಟ್ರಗಳಲ್ಲಿ ತುರ್ತು ಬಳಕೆಗೆ ಅನುಮೋದನೆ ಪಡೆದಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss