ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ರೆಮೆಲ್ ಚಂಡಮಾರುತದಿಂದ ಸಾಕಷ್ಟು ಅನಾಹುತ ಸಂಭವಿಸಿದೆ. ಈ ಚಂಡಮಾರುತದಿಂದ ಉಂಟಾದ ಭಾರೀ ಮಳೆಗೆ ಮಿಜೋರಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಕನಿಷ್ಠ 37 ಜನರು ಮೃತಪಟ್ಟಿದ್ದಾರೆ. ಹತ್ತಾರು ಜನರು ನಾಪತ್ತೆಯಾಗಿದ್ದಾರೆ.
ಮಳೆಯಿಂದ ಮನೆಗಳು ಧ್ವಂಸಗೊಂಡು ವಿದ್ಯುತ್ ತಂತಿಗಳು ನೆಲಕ್ಕುರುಳಿವೆ. ನೂರಾರು ಮಂದಿ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಯುವಂತಾಗಿದೆ. ಮಿಜೋರಾಂನಲ್ಲಿ ಅತಿ ಹೆಚ್ಚಿನ ಪ್ರಮಾಣದ ಹಾನಿಯಾಗಿದೆ. ಸಾವಿರಾರು ಮಂದಿ ಮನೆಮಠ ಕಳೆದುಕೊಂಡಿದ್ದಾರೆ.
ರೆಮಲ್ ಚಂಡಮಾರುತವು ಮಿಜೋರಾಂನ ರಾಜಧಾನಿ ಐಜ್ವಾಲ್‌ನ ಮೆಲ್ತಮ್, ಹ್ಲಿಮೆನ್, ಫಾಲ್ಕಾವ್ನ್ ಮತ್ತು ಸೇಲಂ ವೆಂಗ್ ಪ್ರದೇಶಗಳಲ್ಲಿ 27 ಜನರನ್ನು ಬಲಿ ತೆಗೆದುಕೊಂಡಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಪರಿಹಾರ ತಂಡಗಳು ಇದುವರೆಗೆ 27 ಮಂದಿಯ ಮೃತದೇಹಗಳನ್ನು ಹೊರತೆಗೆದಿದ್ದು, ನಗರದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಲಾಲ್ದುಹೋಮ ಅವರು, ಮೃತರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ