ಹೊಸ ದಿಗಂತ ವರದಿ, ಮೈಸೂರು:
ರೈತರ ಆದಾಯ ಹೆಚ್ಚಾದರೆ, ಅವರ ಕುಟುಂಬದ ಜೀವನದ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಕೇವಲ ಕೃಷಿಯ ಆದಾಯದಿಂದ ರೈತನ ಬದುಕು ಹಸನಾಗುತ್ತಿಲ್ಲ ಹಾಗಾಗಿ ಇತರ ಮೂಲಗಳಿಂದ ರೈತರ ಆದಾಯ ಹೆಚ್ಚಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಭಾನುವಾರ ಮೈಸೂರಿನ ಕಲಾಮಂದಿರದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ವಿಶ್ವ ರೈತ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ರೈತ ಸಮಾವೇಶ ಹಾಗೂ ರೈತ ಹೋರಾಟದಲ್ಲಿ 40ವರ್ಷ ಪೂರೈಸಿರುವ ಕುರುಬೂರು ಶಾಂತಕುಮಾರ್ ಸನ್ಮಾನ ಸಮಾರಂಭದಲ್ಲಿ ಕುರುಬೂರು ಶಾಂತಕುಮಾರ್ ಗೆ ರೈತರತ್ನ ಬಿರುದು,ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲಾ ರಾಜಕೀಯ ಪಕ್ಷಗಳು ರೈತರಿಗೆ ಸೇರಿವೆ. ಹಾಗಾಗಿ ಯಾವ ಪಕ್ಷ ಅಧಿಕಾರಕ್ಕೆ ಬಂದರೂ ರೈತರ ಕಲ್ಯಾಣವಾಗಬೇಕು.
ರೈತರು ಎಲ್ಲಾ ರಾಜಕೀಯ ಪಕ್ಷಗಳ ಬೆನ್ನೆಲುಬಿದ್ದಂತೆ. ಚಳವಳಿ ಹಾಗು ರಾಜಕಾರಣದ ನಡುವೆ ಸಂಬAಧ ಇರಬೇಕಿತ್ತು. ಆದರೆ ವಾಸ್ತವದಲ್ಲಿ ಹಾಗಾಗಲಿಲ್ಲ. ಆಹಾರ ಕೊಂಡುಕೊAಡವನ ಜೇಬು ಭರ್ತಿಯಾಗಿದೆ. ಆಹಾರ ಉತ್ಪಾದನೆ ಮಾಡಿದ ರೈತನ ಜೇಬು ಖಾಲಿಯಾಗಿದೆ. ಉತ್ಪಾದನೆ ಕಡಿಮೆ ಆದರೂ ಸಮಸ್ಯೆ, ಹೆಚ್ಚಾದರೂ ಸಮಸ್ಯೆಯಾಗಲಿದೆ. ಹೊಸ ಹೊಸ ತಳಿಗಳು ಬರುತ್ತಿವೆ. ಬಹುರಾಷ್ಟ್ರೀಯ ಕಂಪನಿಗಳು ತಮ್ಮ ಬಿತ್ತನೆ ಬೀಜಗಳನ್ನು ನೀಡಿ, ಇವುಗಳಿಂದಲೇ ಬೆಳೆ ಬೆಳೆದುಕೊಡಬೇಕು ಎಂಬAತಹ ಸ್ಥಿತಿ ನಿರ್ಮಾಣವಾಗಿದೆ. ರೈತರು ಒಂದು ತಳಿಯಿಂದ ಮತ್ತೊಂದು ತಳಿಗೆ ಹೋಗುವಲ್ಲಿ ಸುಸ್ತಾಗುತ್ತಿದೆ. ಬಹುರಾಷ್ಟ್ರೀಯ ಕಂಪನಿಗಳು ರೈತರ ಬಿತ್ತನೆ, ಬೆಳೆ, ಬೆಲೆಯನ್ನು ನಿಯಂತ್ರಿಸುತ್ತಿವೆ. 2007ರ ನಂತರ ಮೆಟ್ರೋ, ರಿಲೆಯನ್ಸ್ ಸೇರಿದಂತೆ 47 ಖಾಸಗಿ ಕಂಪನಿಗಳು ಕೃಷಿ ಕ್ಷೇತ್ರದ ಮಾರುಕಟ್ಟೆಗೆ ಬಂದಿದ್ದು, ದೇಶದ ಕೃಷಿಯನ್ನು ನಿಯಂತ್ರಣ ಮಾಡುತ್ತಿವೆ. ಇದರಿಂದಾಗಿ ರೈತರ ಆರ್ಥಿಕ ಪರಿಸ್ಥಿತಿ ದಿನೇ ದಿನೇ ಗಂಭೀರವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಪ್ರಸ್ತುತ ಸನ್ನಿವೇಶದಲ್ಲಿ ಆಹಾರ ಉತ್ಪಾದನೆ ಜಾಸ್ತಿಯಾಗಿದೆ. ಬೆಳೆ ನಿಯಂತ್ರಣ, ಬೆಲೆ ನಿಗಧಿ ಬಹು ದೊಡ್ಡ ಸಮಸ್ಯೆಯಾಗಿದೆ. ಡಬ್ಯು÷್ಲಟಿಒ ಒಪ್ಪಂದಕ್ಕೆ ಸಹಿ ಹಾಕಿದ ಪರಿಣಾಮ ನಮ್ಮ ಹಣೆ ಬರಹ ಬದಲಾಯಿತು. ಈ ರೀತಿಯ ಒಪ್ಪಂದಗಳಿಗೆ ಸಹಿ ಹಾಕಿದಾಗ ದೂರಗಾಮಿ ಪರಿಣಾಮಗಳು ಬೀರುತ್ತವೆ. ಇದೆಲ್ಲದರ ಪರಿಣಾಮ ಸಾಲದ ಸಂಕೋಲೆಯಲ್ಲಿ ರೈತ ಸಿಲುಕಿದ್ದಾನೆ. ಅಂತರರಾಷ್ಟಿçÃಯ ಮಾರುಕಟ್ಟೆ ನಿಯಂತ್ರಣ ವ್ಯವಸ್ಥೆಯಿಂದ ಹೊರ ಬಂದರೆ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಕೃಷಿ ಮತ್ತು ರೈತನ ಮೇಲೆ ನಮ್ಮ ಲಕ್ಷ÷್ಯ ಇರಬೇಕು ಎಂದು ಹೇಳಿದರು.
ರೈತರ ಬದುಕು ಅನಿಶ್ಚಿತೆಯಿಂದ ಕೂಡಿದೆ. ಮಳೆ ಬಂದರೂ ಬೆಳೆ ಸಿಗುತ್ತಿಲ್ಲ, ಬೋರ್ ವೆಲ್ ಹಾಕಿಸಿದರೂ ನೀರು ಬರುತ್ತಿಲ್ಲ, ಬೆಳೆ ಬೆಳೆದರೂ ಬೆಲೆ ಸಿಗುತ್ತಿಲ್ಲ ಎಂಬ ಸಮಸ್ಯೆಗಳಿವೆ. ಇವುಗಳಿಗೆ ಸೂಕ್ತ ಪರಿಹಾರವನ್ನು ನೀಡಬೇಕಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಹೆಂಚಿನ ಮನೆಯಲ್ಲಿ ರೈತರ ಕುಟುಂಬ ವಾಸಿಸುತ್ತಿದೆ ಎಂದರೆ, ಅಲ್ಲಿ ಕೃಷಿ ಬಿಟ್ಟು ಬೇರೆ ಏನೂ ಮಾಡುತ್ತಿಲ್ಲ ಎಂದರ್ಥ. ತಾರಸಿ ಮನೆಯಿದ್ದರೆ, ಕೃಷಿ ಜೊತೆಗೆ ಬೇರೆ ಕ್ಷೇತ್ರದಲ್ಲೂ ಆ ಕುಟುಂಬದ ಸದಸ್ಯರು ತೊಡಗಿಸಿಕೊಂಡು, ಆದಾಯಗಳಿಸುತ್ತಿದ್ದಾರೆ. ಹಾಗಾಗಿ ರೈತರನ್ನು ಕೃಷಿ ಜೊತೆಗೆ ಆದಾಯ ಬರುವಂತಹ ಬೇರೆ ಚಟುವಟಿಕೆಗಳಲ್ಲೂ ತೊಡಗಿಸಬೇಕಾಗಿದೆ. ಹಾಗಾಗಿ ರೈತ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡಲು ನಿರ್ಧರಿಸಿದ್ದೇನೆ ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಹೈಸ್ಕೂಲ್ಗೆ ಬರುವ ಹೆಣ್ಣು ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಇದನ್ನು ತಡೆಯಲು ನಿಟ್ಟಿನಲ್ಲಿ ರೈತರ ಹೆಣ್ಣು ಮಕ್ಕಳಿಗೆ ಸಂಪೂರ್ಣವಾಗಿ ಉಚಿತ ಶಿಕ್ಷಣವನ್ನು ನೀಡಲು ತೀರ್ಮಾನಿಸಿದ್ದೇನೆ. ಈಗಾಗಲೇ 2.40 ಲಕ್ಷ ಹೆಣ್ಣು ಮಕ್ಕಳಿಗೆ ಉಚಿತ ವಿದ್ಯಾಬ್ಯಾಸ ನೀಡಲು ಕ್ರಮ ಕೈಗೊಳ್ಳಲಾಗಿದೆ. ಬರುವ ಮಾರ್ಚ್ ವೇಳೆ 5 ಲಕ್ಷ ರೈತರ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡಲು ಕ್ರಮವಹಿಸಲಾಗುವುದು ಎಂದು ಹೇಳಿದರು.
ರೈತರು ತಮ್ಮ ಕುಟುಂಬದವರ ಅನಾರೋಗ್ಯ, ಮದುವೆ ಮುಂತಾದ ಕಾರ್ಯಗಳಿಗೆ ಹಣ ವ್ಯಯ ಮಾಡಿ, ಸಾಲದ ಕೂಪಕ್ಕೆ ಸಿಲುಕುತ್ತಿದ್ದಾರೆ. ಹಾಗಾಗಿ ರೈತರ ಆದಾಯಗಳನ್ನು ಹೆಚ್ಚಿಸಿ, ಅವರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಗಟ್ಟಿಗೊಳಿಸುವ ಯೋಜನೆಗಳು ಆಗಬೇಕಿದೆ. ರೈತರು ಸಮಗ್ರ ಕೃಷಿಯತ್ತ ಹೋಗಬೇಕಾಗಿದೆ. ರೈತರ ಪರ ರಾಜ್ಯ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ. ರೈತರ ಧ್ವನಿಗೆ ನಾವು ಧ್ವನಿಯಾಗಲಿದ್ದೇವೆ. ರೈತರ ಸಮಸ್ಯೆಗಳನ್ನು ಪರಿಹರಿಸಲು ಹಲವು ಯೋಜನೆಗಳನ್ನು ಜಾರಿಗೊಳಿಸಲಿದ್ದೇವೆ ಎಂದು ತಿಳಿಸಿದರು.
ಕಾರ್ಯಕ್ರಮದ ಸಾನಿಧ್ಯವನ್ನು ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ವಹಿಸಿದ್ದರು. ಪಬ್ಲಿಕ್ ಟಿವಿಯ ಮುಖ್ಯಸ್ಥ ಹೆಚ್.ಆರ್.ರಂಗನಾಥ್, ಕನ್ನಡ ಪ್ರಭ ಪತ್ರಿಕೆಯ ಪ್ರಧಾನ ಸಂಪಾದಕ ರವಿ ಹೆಗಡೆ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ರೈತರ ಆದಾಯ ದ್ವಿಗುಣ ಸಮಿತಿಯ ಮುಖ್ಯಸ್ಥ ಅಶೋಕ್ ದಳವಾಯಿ, ಗೋಫಿನಾಥ್ ಮತ್ತಿತರರು ಉಪಸ್ಥಿತರಿದ್ದರು.