ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ನಂದಿನಿ ಲೇಔಟ್ ಠಾಣೆ ಪೊಲೀಸರು ಇಂದು ಸ್ಥಳ ಮಹಜರು ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಎಫ್ ಐಆರ್ ದಾಖಲಿಸಿಕೊಂಡಿರುವ ನಂದಿನಿ ಲೇಔಟ್ ಠಾಣೆ ಪೊಲೀಸರು ಇದೀಗ ಮುನಿರತ್ನ ಜೊತೆಗೆ ಸ್ಥಳ ಮಹಜರು ಮಾಡಿದ್ದಾರೆ.
ಸ್ಥಳ ಮಹಜರು ವೇಳೆ ಶಾಸಕ ಮುನಿರತ್ನ ಅವರು ಘಟನೆ ಬಗ್ಗೆ ವಿವರಿಸಿದ್ದು, ಆ್ಯಸಿಡ್ ದಾಳಿ ನಡೆಸಲಾಗಿದೆ ಎಂದು ಹೇಳಿದ್ದಾರೆ.