ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಲ್ಲಾ ಸರ್ಕಾರಿ ಶಾಲೆಗಳಲ್ಲಿ (Government Schools) ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜತೆಗೆ ವಾರದಲ್ಲಿ ಎರಡು ಬಾರಿ ಮೊಟ್ಟೆ (Egg) ಅಥವಾ ಬಾಳೆ ಹಣ್ಣು (Banana) ನೀಡುವ ಯೋಜನೆಯು ಆಗಸ್ಟ್ 18ರಿಂದ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಮೊದಲು 8 ನೇ ತರಗತಿಯವರೆಗೆ ಈ ಯೋಜನೆ ಜಾರಿಗೊಳಿಸಬೇಕು ಎಂದಾಗಿತ್ತು. ಆದರೆ ಈಗ ಹತ್ತನೇ ತರಗತಿವರೆಗೂ ವಿಸ್ತರಿಸಬೇಕು ಎಂಬ ನಿರ್ಧಾರ ಕೈಗೊಳ್ಳಲಾಗಿದೆ. ಪೌಷ್ಟಿಕಾಂಶಯುಕ್ತ ಆಹಾರ ನೀಡುವ ಹಿನ್ನಲೆಯಲ್ಲಿ ಈ ಯೋಜನೆಯು ಜಾರಿಗೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಈ ಯೋಜನೆಯು ಉದ್ಘಾಟನೆಗೊಳ್ಳಲಿದೆ . ವಾರದಲ್ಲಿ ಎರಡು ಬಾರಿ ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ಮೊಟ್ಟೆ ವಿತರಿಸಲಾಗುವುದು. ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗಾಗಿ ಬಾಳೆಹಣ್ಣನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.