ಮೊಟ್ಟೆ, ಕಬಾಬ್, ಕೋಳಿ ಸಾಂಬಾರ್,ಮುದ್ದೆ.. ಕನ್ನಡ ಜಾತ್ರೆಯಲ್ಲಿ ಬಾಡೂಟ ವಿತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಇದೀಗ ರಾಜ್ಯದಲ್ಲಿ ವ್ಯಾಪಕ ವಿವಾದಕ್ಕೆ ಕಾರಣವಾಗಿದೆ.

ಸಕ್ಕರೆನಾಡು ಮಂಡ್ಯದಲ್ಲಿ ಎರಡು ದಿನಗಳಿಂದ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ನಡೆಯುತ್ತಿದ್ದು, ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನೀಡಬೇಕು ಎಂದು ಪ್ರಗತಿಪರರು ಧ್ವನಿ ಎತ್ತಿದ್ದರು. ಆದರೆ ಪ್ರತಿವರ್ಷದಂತೆ ಈ ಬಾರಿ ಕೂಡ ಸಸ್ಯಹಾರವನ್ನು ನೀಡಲಾಗುತ್ತಿತ್ತು. ಆದರೆ ಆದರೆ ಕೊನೆಯ ದಿನವಾದ ಇಂದು ಸಮ್ಮೇಳನದಲ್ಲಿ ಬಾಡೂಟ ಹಂಚಿಕೆ ಮಾಡಲಾಗಿದೆ.

87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಹಂಚಿಕೆಗಾಗಿ ಜಟಾಪಟಿ ಉಂಟಾಗಿದ್ದು, ಪ್ರಗತಿಪರರು ಮೊಟ್ಟೆ, ಚಿಕನ್, ಕಬಾಬ್, ಕೋಳಿ ಸಾಂಬಾರ್, ರಾಗಿ ಮುದ್ದೆ ಹಂಚಿಕೆ ಮಾಡಿದ್ದಾರೆ. ಈ ಕುರಿತ ವಿಡಿಯೋ ವೈರಲ್ ಆಗುತ್ತಿದ್ದು, ಈ ಮಧ್ಯೆ ಪೊಲೀಸರು ಮತ್ತು ಪ್ರಗತಿಪರರ ನಡುವೆ ವಾಗ್ವಾದ ಉಂಟಾಗಿದೆ. ಮಾಂಸಾಹಾರ ವಿತರಣೆ ವೇಳೆ ನೂಕು ನುಗ್ಗಲು ಉಂಟಾಗಿ ಗಲಾಟೆ ನಡೆದಿದೆ. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸ್ ಸಿಬ್ಬಂದಿ ಕೊನೆಗೂ ಮಾಂಸಾಹಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನು ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆದರೆ ಪ್ರಗತಿಪರರು ಮಾಂಸಾಹಾರ ವಿತರಣೆಗೆ ಪಟ್ಟು ಹಿಡಿದ್ದರು. ಈ ವಾದ-ವಿವಾದಗಳ ನಡುವೆಯೇ ಪ್ರಗತಿಪರರು ಸಮ್ಮೇಳದ ಊಟದ ಕೌಂಟರ್​ನಲ್ಲೇ ಮಾಂಸಾಹಾರ ವಿತರಣೆ ಮಾಡಿದ್ದಾರೆ. ಈ ವೇಳೆ ಮಾಂಸಾಹಾರಕ್ಕಾಗಿ ಸಮ್ಮೇಳನಕ್ಕೆ ಆಗಮಿಸಿದ್ದ ಜನರು ಮುಗಿಬಿದ್ದರಿಂದ ನೂಕುನುಗ್ಗಲು ಉಂಟಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!