ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣೆ ಫಲಿತಾಂಶದ ಕುರಿತು ಹಿರಿಯ ನಟ ಪ್ರಕಾಶ್ ರೈ ಪ್ರತಿಕ್ರಿಯಿಸಿದ್ದಾರೆ
ಈ ಕುರಿತು ಎಕ್ಸ್ ಖಾತೆಯಲ್ಲಿ ಪ್ರಕಾಶ್ ರೈ (Actor Prakash Rai) ತಮ್ಮ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಎಂದಿನಂತೆ ಸಾಲಿನ ಕೊನೆಗೆ ಜಸ್ಟ್ ಆಸ್ಕಿಂಗ್ ಹ್ಯಾಶ್ ಟ್ಯಾಗ್ ಹಾಕಿಕೊಂಡಿದೆ.
ಚಕ್ರವರ್ತಿಯು ಬೆತ್ತಲೆಯಾಗಿದ್ದಾನೆ. ಅವನು ಈಗ ಬೇರೊಬ್ಬರ ಬೆಂಬಲದ ಸಹಾಯ ಪಡೆದುಕೊಳ್ಳುವಂತಾಗಿದೆ. ಭಾರತ ಮತ್ತು ಜವಾಬ್ದಾರಿಯುತ ನಾಗರಿಕ ಸಮಾಜಕ್ಕೆ ಧನ್ಯವಾದಗಳು. ಅಹಂಕಾರವನ್ನು ಪಂಕ್ಚರ್ ಮಾಡಿ, ಅವರ ಸ್ಥಾನವನ್ನು ತೋರಿಸಿದ್ದಕ್ಕೆ ಧನ್ಯವಾದಗಳು. ನಾವು ನಮ್ಮ ದೇಶಕ್ಕಾಗಿ ಉತ್ತಮ ರೀತಿಯಲ್ಲಿ ಹೋರಾಡಿದ್ದು, ಇದು ಮುಂದುವರಿಯುತ್ತದೆ ಎಂದು ಪ್ರಕಾಶ್ ರೈ ಬರೆದುಕೊಂಡಿದ್ದಾರೆ.
ಈ ಬಾರಿ ಎಲ್ಲಾ ಎಕ್ಸಿಟ್ ಪೋಲ್‌ಗಳ ಲೆಕ್ಕಾಚಾರವನ್ನು ಫಲಿತಾಂಶ ಉಲ್ಟಾ ಮಾಡಿದೆ.