ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಂಪು ಸಮುದ್ರದಲ್ಲಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ದೋಣಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಈಜಿಪ್ಟ್‌ನಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೂವರು ನಾಪತ್ತೆಯಾಗಿದ್ದು, ಅಪಘಾತದ ವೇಳೆ ದೋಣಿಯಲ್ಲಿ 27 ಮಂದಿ ಇದ್ದರು ಎನ್ನಲಾಗಿದೆ. ನಾಪತ್ತೆಯಾದ ಮೂವರನ್ನು ಬ್ರಿಟಿಷ್ ಪ್ರಜೆಗಳು ಎಂದು ಗುರುತಿಸಲಾಗಿದೆ. ಈ ಮೂವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಭಾನುವಾರ ಲಗಸಾಗರಕ್ಕೆ ತೆರಳುತ್ತಿದ್ದಾಗ ದೋಣಿಗೆ ಹಠಾತ್ ಬೆಂಕಿ ಹೊತ್ತಿಕೊಂಡ ಘಟನೆ ಬೆಳಕಿಗೆ ಬಂದಿದೆ. ಪ್ರಸ್ತುತ 27 ಮಂದಿಯಲ್ಲಿ 15 ಮಂದಿ ಬ್ರಿಟಿಷ್ ಪ್ರವಾಸಿಗರು. ಅಪಘಾತದ ನಂತರ 24 ಜನರನ್ನು ರಕ್ಷಿಸಲಾಗಿದೆ. ಬ್ರಿಟಿಷ್ ಅಧಿಕಾರಿಗಳು ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದಾರೆ. ಬ್ರಿಟಿಷ್ ವಿದೇಶಾಂಗ ಕಚೇರಿ ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಆದರೆ, ದೋಣಿಯಲ್ಲಿ ಬೆಂಕಿ ಹೇಗೆ ಹೊತ್ತಿಕೊಂಡಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.