ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ: ಹೊಸ ಇತಿಹಾಸ ಬರೆಯಲಿದೆ ಈ ಬಾರಿಯ ಗಣರಾಜ್ಯೋತ್ಸವ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿಯ ಗಣರಾಜ್ಯೋತ್ಸವ ಸಂಭ್ರಮಕ್ಕೆ ಇನ್ನಷ್ಟು ಕಳೆ ಮೂಡಲಿದೆ.
ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರಿಗೆ ಭಾರತ ಸರ್ಕಾರ ಆಹ್ವಾನ ನೀಡಿದ್ದು, ಭಾರತದ ಗಣರಾಜ್ಯೋತ್ಸವಕ್ಕೆ ಅರಬ್ ರಿಪಬ್ಲಿಕ್ ಆಫ್ ಈಜಿಪ್ಟ್‌ನ ಅಧ್ಯಕ್ಷರೋರ್ವರು ಆಗಮಿಸುತ್ತಿರುವುದು ಇದೇ ಮೊದಲಾಗಿದ್ದು, ಅವರ ಆಗಮನ ಹೊಸ ದಾಖಲೆ ಬರೆಯಲಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯವು, ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಹಿನ್ನೆಲೆಯಲ್ಲಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರು ಜ.೨೬ ಭಾರತದ ಗಣರಾಜ್ಯೋತ್ಸವ ದಿನಾಚರಣೆಗೆ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ಹೇಳಿದೆ.
೨೦೨೦ರ ಗಣರಾಜ್ಯೋತ್ಸವದಲ್ಲಿ ಬ್ರೆಜಿಲ್ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಅತಿಥಿಯಾಗಿದ್ದರು. ಆ ಬಳಿಕ ಎರಡು ವರ್ಷ ಕೋವಿಡ್ ಕಾರಣಗಳಿಂದಾಗಿ ಮುಖ್ಯ ಅತಿಥಿಗಳನ್ನು ಆಹ್ವಾನಿಸಿರಲಿಲ್ಲ. ಈ ಬಾರಿ ಈಜಿಪ್ಟ್ ಅಧ್ಯಕ್ಷರಿಗೆ ಆಹ್ವಾನ ಹೋಗಿದೆ. ಇದಕ್ಕೂ ಮುನ್ನ ಅ.೧೬ರಂದು ಈಜಿಪ್ಟ್‌ಗೆ ಅಧಿಕೃತ ಭೇಟಿ ನೀಡಿದ್ದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಅಲ್ಲಿನ ಅಧ್ಯಕ್ಷರನ್ನು ಭೇಟಿಯಾಗಿ ಗಣರಾಜ್ಯೋತ್ಸವಕ್ಕೆ ಔಪಚಾರಿಕ ಆಹ್ವಾನ ನೀಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!