ಜಗತ್ಪ್ರಸಿದ್ದ ಐಫೆಲ್‌ ಟವರ್‌ಗೆ ಬಾಂಬ್‌ ಬೆದರಿಕೆ ಕರೆ: ಅಧಿಕಾರಿಗಳು ಅಲರ್ಟ್ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಿಶ್ವದಲ್ಲಿ ಅತಿ ಹೆಚ್ಚು ಭೇಟಿ ನೀಡುವ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಐಫೆಲ್ ಟವರ್‌ಗೂ ಬಾಂಬ್ ಬೆದರಿಕೆ ಬಂದಿತ್ತು. ಶನಿವಾರ ಮಧ್ಯಾಹ್ನ ಪ್ಯಾರಿಸ್‌ನಲ್ಲಿರುವ ಟವರ್‌ನಲ್ಲಿ ಬಾಂಬ್‌ ಇರುವ ಬೆದರಿಕೆ ಕರೆಯಿಂದ ಅಧಿಕಾರಿಗಳು ಅಲರ್ಟ್‌ ಆಗಿದ್ದಾರೆ. ತಕ್ಷಣವೇ ಅಲ್ಲಿದ್ದ ಪ್ರವಾಸಿಗರನ್ನು ಸ್ಥಳಾಂತರ ಮಾಡಲಾಯಿತು. ಬಾಂಬ್‌ ನಿಷ್ಕ್ರಿಯ ತಂಡವನ್ನು ಕರೆಸಿ, ಎಲ್ಲ ಮಹಡಿಗಳಲ್ಲಿ ತಪಾಸಣೆ ನಡೆಸಲಾಯಿತು. ಈ ಕ್ರಮದಲ್ಲಿ ಅನುಮಾನಾಸ್ಪದವಾಗಿ ಕಂಡ ಪ್ರವಾಸಿಗರನ್ನೂ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಅಧಿಕಾರಿಗಳು ಐಫೆಲ್ ಟವರ್ ಸುತ್ತ ಭದ್ರತೆ ಹೆಚ್ಚಿಸಿದ್ದಾರೆ. ಮುನ್ನೆಚ್ಚರಿಕೆಯಾಗಿ ಶನಿವಾರದಿಂದ ಯಾವುದೇ ಪ್ರವಾಸಿಗರಿಗೆ ಐಫೆಲ್ ಟವರ್‌ಗೆ ಭೇಟಿ ನೀಡಲು ಅವಕಾಶ ನೀಡಲಾಗಿಲ್ಲ. ಬಂದ ಪ್ರವಾಸಿಗರನ್ನು ವಾಪಸ್ ಕಳುಹಿಸಲಾಯಿತು. ತಪಾಸಣೆ ಬಳಿಕ ಯಾವುದೇ ಬಾಂಬ್ ಪತ್ತೆಯಾಗದ ಕಾರಣ ಅಧಿಕಾರಣ ನಿಟ್ಟುಸಿರು ಬಿಟ್ಟಿದ್ದಾರೆ. ಈ ಬೆದರಿಕೆ ಕರೆ ಯಾರು ಮಾಡಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಶ್ವದ ಏಳು ಅದ್ಭುತಗಳಲ್ಲಿ ಒಂದಾಗಿರುವ ಐಫೆಲ್ ಟವರ್ ನೋಡಲು ದೇಶ-ವಿದೇಶಗಳಿಂದ ಜನ ಬರುತ್ತಾರೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಐಫೆಲ್ ಟವರ್ ಪ್ರದೇಶದಲ್ಲಿ ಪೊಲೀಸ್ ಅಧಿಕಾರಿಗಳು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!