ಖಾಸಗಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡದಲ್ಲಿ ಎಂಟು ಸಾವು, 9 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಮಧ್ಯ ಪ್ರದೇಶದ ಜಬಲ್ಪುರ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅಗ್ನಿ ಅವಘಡದಲ್ಲಿ ಎಂಟು ಜನರು ಸಾವನ್ನಪ್ಪಿ, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರೋಗಿಗಳನ್ನು ಸ್ಥಳಾಂತರಿಸಲು ಆಸ್ಪತ್ರೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಬಲ್‌ಪುರ ಜಿಲ್ಲಾಧಿಕಾರಿ ಡಾ.ಇಳಯರಾಜ ಟಿ ತಿಳಿಸಿದ್ದಾರೆ.
ಜಬಲ್ಪುರ ಪೊಲೀಸ್ ವಕ್ತಾರ ರವೀಂದ್ರ ಸಿಂಗ್ ಅವರು ಅವಘಡದಲ್ಲಿ ಎಂಟು ಜನರು ಸಾವನ್ನಪ್ಪಿರುವುದನ್ನು ಖಚಿತಪಡಿಸಿದ್ದಾರೆ.
ಜಬಲ್‌ಪುರದ ಗೋಹಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದಾಮೋಹ್ ನಾಕಾ ಬಳಿಯ ನ್ಯೂ ಲೈಫ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ಧಾರ್ಥ್ ಬಹುಗುಣ ತಿಳಿಸಿದ್ದಾರೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಮೇಲ್ನೋಟಕ್ಕೆ ತೋರುತ್ತದೆ ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

error: Content is protected !!